
ಲಿಂಗಸುಗೂರು,ಆ.೨೦-
ಲಿಂಗಸುಗೂರ ಪಟ್ಟಣದಲ್ಲಿ ಹೆಣ್ಣು ಮಕ್ಕಳು ಸಡಗರದಿಂದ ನಾಗರ ಪಂಚಮಿ ಹಬ್ಬ ಆಚರಣೆ.
ನಾಗ ಪಂಚಮಿಯು ಭಾರತದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ.
ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಈ ದಿನದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿಗೆ ಭೇಟಿ ನೀಡಿ, ಎಲ್ಲ ಕೆಡುಕುಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ ಮತ್ತು ಈ ಹಬ್ಬವು ಅಣ್ಣ -ತಂಗಿ ಇಬ್ಬರೂ ಸೇರಿ ಪೂಜಿಸಲ್ಪಡುವ ಹಬ್ಬವೆಂದು ಪ್ರತೀತಿ ಇದೆ.
ನಾಗರಪಂಚಮಿಯ ದಿನ ಅರಿಶಿನ ಅಥವಾ ರಕ್ತಚಂದನದಿಂದ ಮಣೆಯ ಮೇಲೆ ನವನಾಗಗಳ ಆಕೃತಿಗಳನ್ನು ಬಿಡಿಸಿ ಅವುಗಳ ಪೂಜೆಯನ್ನು ಮಾಡಿ ಹಾಲು ಮತ್ತು ಅರಳಿನ ನೈವೇದ್ಯವನ್ನು ಅರ್ಪಿಸಬೇಕು. ನವನಾಗಗಳು ಪವಿತ್ರ ಒಂಬತ್ತು ಪ್ರಮುಖ ಗುಂಪುಗಳಾಗಿವೆ.
ಈ ಸಂದರ್ಭದಲ್ಲಿ ಶಿಲ್ಪಾ, ಸಂಜನಾ, ಪ್ರಿಯದರ್ಶಿನಿ, ಸುಧಾ, ಇನ್ನಿತರ ಮಹಿಳೆಯರು ನಾಗರ ಪಂಚಮಿ ಹಬ್ಬದಂದು ನಾಗರ ಮೂರ್ತಿಗಳಿಗೆ ಹಾಲು ಎರೆಯುವ ಮೂಲಕ ಆಚರಣೆ ಮಾಡಿದರು.