ನಾಡಗೀತೆ ಕಡ್ಡಾಯವಲ್ಲ ಸುತ್ತೋಲೆ: ಸಚಿವ ತಂಗಡಗಿ ವಜಾಕ್ಕೆ ಒತ್ತಾಯ

ಕಲಬುರಗಿ:ಫೆ.21: ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ನಾಡಗೀತೆ ಖಾಸಗಿ ಶಾಲೆಗಳಲ್ಲಿ ಕಡ್ಡಾಯವಲ್ಲ ಎಂಬ ಸುತ್ತೋಲೆ ಹೊರಡಿಸಿರುವುದು ಖಂಡನಾರ್ಹ. ಕೂಡಲೇ ಕನ್ನಡ ಮತ್ತು ಸಂಸ್ಕøತಿ ಖಾತೆ ಸಚಿವ ಶಿವರಾಜ್ ತಂಗಡಗಿಯವರಿಗೆ ಸಂಪುಟದಿಂದ ವಜಾಗೊಳಿಸಬೇಕು ಎಂದು ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಶಿವಲಿಂಗ್ ಹಳಿಮನಿ ಅವರು ಒತ್ತಾಯಿಸಿದ್ದಾರೆ.
ಕನ್ನಡ ವಿರೋಧಿ ರಾಜ್ಯ ಸರ್ಕಾರಕ್ಕೆ ಧಿಕ್ಕಾರ. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಇಂತಹ ಅಸಂಬದ್ಧ ಸುತ್ತೋಲೆಯನ್ನು ಹೊರಡಿಸಿರುವುದು ಖಂಡನಾರ್ಹ. ಕನ್ನಡ ವಿರೋಧಿ ಧೋರಣೆಯನ್ನು ರಾಜ್ಯ ಸರ್ಕಾರವು ಅನುಸರಿಸುತ್ತಿದೆ. ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುತ್ತಿದೆ ಎಂದು ಅವರು ಹೇಳಿಕೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ಸಚಿವ ಶಿವರಾಜ್ ತಂಗಡಗಿಯವರು ರಾಷ್ಟ್ರಕವಿ ಕುವೆಂಪು ಅವರಿಗಿಂತ ದೊಡ್ಡವರು ಎಂಬ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಅವರಿಗೆ ಮಾನ ಮರ್ಯಾದೆ ಇದ್ದರೆ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಈಗಾಗಲೇ ಹಲವು ಬಾರಿ ಕನ್ನಡ ನಾಡಿನ ಜನರ ಹಾಗೂ ಕನ್ನಡ ಸಂಸ್ಕøತಿಯ ವಿಷಯದಲ್ಲಿ ಬಹಳ ಉಡಾಫೆ ಸುತ್ತೋಲೆಗಳನ್ನು ಹೊರಡಿಸಿರುವುದು ನೋಡಿದರೆ ಅವರಿಗೆ ಬುದ್ದಿ ಭ್ರಮಣೆಯಾಗುತ್ತಿದೆ. ಕಾರಣ ಮುಖ್ಯಮಂತ್ರಿಗಳು ಆ ಸಚಿವರ ರಾಜೀನಾಮೆಯನ್ನು ಪಡೆಯಬೇಕು ಎಂದು ಆಗ್ರಹಿಸಿದ ಅವರು, ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟವನ್ನು ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.