
ತಾಳಿಕೋಟೆ :ಮೇ.17: ಈ ಭಾರಿಯ ಕಾಂಗ್ರೆಸ್ ಸರಕಾರದಲ್ಲಿ ಸಚಿವ ಸಂಪುಟದಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರಿಗೆ ಮಂತ್ರಿ ಸ್ಥಾನ ನೀಡುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಹಿಬೂಬ ಚೋರಗಸ್ತಿ ಅವರು ಪಕ್ಷದ ವರಿಷ್ಠರಿಗೆ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷದ ಸ್ಪಷ್ಟವಾದ ಭಹುಮತದೊಂದಿಗೆ ಸರ್ಕಾರ ರಚಿಸುತ್ತಿರುವದು ಒಳ್ಳೆಯ ಬೆಳವಣಿಗೆಯಾಗಿದೆ ಈ ಹಿಂದೆ 1989ರಲ್ಲಿ ನಾಡಗೌಡರಿಗೆ ಕಾರ್ಮಿಕ ಸಚೀವ ಸ್ಥಾನ ನೀಡಲಾಗಿತ್ತು 6 ಭಾರಿ ಕಾಂಗ್ರೇಸ್ ಪಕ್ಷದ ನೇತ್ರತ್ವದಲ್ಲಿ ಶಾಸಕರಾಗಿ ಆಯ್ಕೆಗೊಂಡಿದ್ದಾರೆ ಸರ್ವ ಜನಾಂಗದ ಏಳೆಗೆ ಬಯಸುತ್ತಾ ಸಾಗಿರುವ ನಾಡಗೌಡರಿಗೆ ಈ ಭಾರಿಯ ಸಚೀವ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಪ್ರಾತಿನಿಧ್ಯ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ವರಿಷ್ಠರಲ್ಲಿ ಹಾಗೂ ಸಿದ್ದರಾಮಯ್ಯನವರಲ್ಲಿ ಮತ್ತು ಡಿ.ಕೆ.ಶಿವಕುಮಾರ ಅವರಲ್ಲಿ ಬ್ಲಾಕ್ ಕಾಂಗ್ರೇಸ್ ಪರವಾಗಿ ಒತ್ತಾಯಿಸುತ್ತೇವೆಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.