ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ರಾಯಚೂರು,ಜೂ.೨೮-
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ನಾಡಪ್ರಭು ಕೆಂಪೇಗೌಡ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಸಭಾಗಂಣದಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಲ್. ಚಂದ್ರಶೇಖರ ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ವೀರ ಹನುಮಾನ, ಎಸ್.ಜಿ.ಎಂ.ಪೀರಜಾದೆ, ದಂಡಪ್ಪ ಬಿರದಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.