ಕಲಬುರಗಿ: ಜೂ.27:ದೇಶದ ಹೆಮ್ಮೆಯ ಬೆಂಗಳೂರಿನ ನಿರ್ಮಾತೃ ಕೆಂಪೇಗೌಡ ಅವರು ನೂರಾರು ವರ್ಷಗಳ ಹಿಂದೆಯೇ ಉತ್ತಮ ರಸ್ತೆಗಳ ನಿರ್ಮಾಣ, ಅನೇಕ ಕೆರೆ-ಬಾವಿಗಳ ನಿರ್ಮಿಸುವುದು ಸೇರಿದಂತೆ ಅನೇಕ ಜನಪರ ಕೆಲಸಗಳನ್ನು ಮಾಡುವ ಮೂಲಕ ನಾಡಿಗೆ ತಮ್ಮದೇ ಆದ ಅನನ್ಯವಾದ ಕೊಡುಗೆಯನ್ನು ನೀಡಿದ್ದಾರೆಂದು ಉಪನ್ಯಾಸಕ, ಚಿಂತಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಮಹಾದೇವ ನಗರದಲ್ಲಿರುವ 'ಸ್ವಾತಿ ಪ್ರೌಢಶಾಲೆ'ಯಲ್ಲಿ 'ಬಸವೇಶ್ವರ ಸಮಾಜ ಸೇವಾ ಬಳಗ'ದ ವತಿಯಿಂದ ಜರುಗಿದ 'ನಾಡಪ್ರಭು ಕೆಂಪೇಗೌಡರ 514ನೇ ಜಯಂತಿ'ಯ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಅವರು ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಗಾರಂಪಳ್ಳಿ ಮಾತನಾಡಿ, ಇಂದು ಬೆಂಗಳೂರನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಲಾಗುತ್ತದೆಂದರೆ, ಅದಕ್ಕೆ ನೂರಾರು ವರ್ಷಗಳ ಹಿಂದೆ ಕೆಂಪೇಗೌಡರು ಅದರ ಅಭಿವೃದ್ಧಿಗೆ ನೀಡಿದ ಶ್ರಮ ಆದಾರವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಬಸಯ್ಯಸ್ವಾಮಿ ಹೊದಲೂರ, ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಶಿವಯೋಗಪ್ಪ ಬಿರಾದಾರ, ಪ್ರಮುಖರಾದ ಸ್ವಾತಿ ಆರ್.ಪವಾಡಶೆಟ್ಟಿ, ನೀಲಕಂಠ ಹಿರೇಮಠ, ಮನೋಹರ ಮಾಲೆ, ದತ್ತಾತ್ರೇಯ ಬಡಗೇರ್, ಸುನೀತಾ ಜಗದಾಪ್, ಅನ್ನಪೂರ್ಣ ಕಾಂತೆ, ಅದಿತಿ, ಆದಿತ್ಯ ಸೇರಿದಂತೆ ಮತ್ತಿತರರು ಇದ್ದರು.