ನಾಡಿದ್ದು ಎನ್ ಡಿಎ ಶಾಸಕಾಂಗ ಪಕ್ದದ ಸಭೆ

ಪಾಟ್ನ ನ . 13- ,ಬಿಹಾರದಲ್ಲಿ ನೂತನ ನಾಯಕನ ಆಯ್ಕೆ ಕಸರತ್ತು ಮುಂದುವರೆದಿದ್ದು, ನಾಡಿದ್ದು ಎನ್ ಡಿಎ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ವೇಳೆ ನಿತೀಶ್ ಕುಮಾರ್ ಅವರನ್ನು ಶಾಶಕಾಂಗ ಪಕ್ಷದ ನಾಯಕರನ್ನಾಗಿ ನೂತನ ಶಾಸಕರು ಆಯ್ಕೆ ಮಾಡಲಿದ್ದಾರೆ.
ಈ ಸಂಬಂಧ ನಿತೀಶ್ ಕುಮಾರ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಎನ್ ಡಿ ಎ ಮೈತ್ತಿ ಕೂಟದ ಪಕ್ಚಗಳಾದ ಜೆಡಿಯು, ಬಿಜೆಪಿ, ಎಚ್ಎಎಎಂ, ವಿಕಾಸ್ ಶೀಲ್ ಇನ್ಸಾನ್ ಪಕ್ಷದ ನಾಯಕರು ಭಾಗವಹಿಸಿದ್ದರು.
ನಿತೀಶ್ ಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಬಗ್ಗೆ ತೀರ್ಮಾನಿಸಲಾಯಿತು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಮಧ್ಯಾನ್ಹ 12.30ಕ್ಕೆ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ನಿತೀಶ್ ಕುಮಾರ್ ಅವರನ್ನೇ ಮುಖ್ಯಮಂತ್ರಿ ಯನ್ನಾಗಿ ಮಾಡಲು ಬಿಜೆಪಿ ತೀರ್ಮಾನಿಸಿದೆ.