ನಾಡಿದ್ದು ನಗರದಲ್ಲಿ ಸಿದ್ದರಾಮೇಶ್ವರ ಜಯಂತಿ

ಬಳ್ಳಾರಿ,ಜ.12: ಶಿವಶರಣ ಸಿದ್ಧರಾಮೇಶ್ವರ ಜಯಂತಿಯನ್ನು ಇದೇ ಜ.14ರಂದು ಬೆಳಗ್ಗೆ 10ಕ್ಕೆ ನಗರದ ಬಿಡಿಎಎ ಸಭಾಂಗಣದಲ್ಲಿ ಸರಳ ಮತ್ತು ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ವiಂಜುನಾಥ್ ಅವರು ತಿಳಿಸಿದರು.
ಶಿವಶರಣ ಸಿದ್ಧರಾಮೇಶ್ವರ ಜಯಂತಿ ನಿಮಿತ್ತ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊವಿಡ್ 19 ವೈರಸ್ ಮತ್ತು ಹೊಸದಾಗಿ ಬಂದಿರುವ ಬ್ರಿಟನ್ ರೋಗದ ಭೀತಿಯ ಹಿನ್ನಲೆ ಈ ಬಾರಿ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು. ಹೆಚ್ಚಿನ ಜನರು ಭಾಗವಹಿಸುವುದರಿಂದ ಕೊರೋನಾ ರೋಗ ಹರಡುವ ವೇಗ ಜಾಸ್ತಿಯಾಗಬಹುದು. ಇದನ್ನು ತಡೆಗಟ್ಟುವ ಉದ್ದೇಶದಿಂದ ಅತ್ಯಂತ ಸರಳವಾಗಿ ಜಯಂತಿ ಆಚರಿಸಿ ಎಂದರು.
ಗ್ರಾಮೀಣ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯ ಜನರು ಜಯಂತಿಯಲ್ಲಿ ಭಾಗವಹಿಸುವುದು ಬೇಡ. ಬದಲಾಗಿ ತಮ್ಮ ತಮ್ಮ ಗ್ರಾಮಗಳಲ್ಲಿಯೇ ಶರಣರ ಜಯಂತಿಯನ್ನು ಆಚರಿಸುವ ಮೂಲಕ ಅವರಿಗೆ ಗೌರವ ನೀಡಿ ಎಂದು ತಿಳಿಸಿದರು. ಸಭೆಯಲ್ಲಿ ಸಹಾಯಕ ಆಯುಕ್ತರಾದ ರಮೇಶ್ ಕೋನರೆಡ್ಡಿ, ಭೋವಿ ವಡ್ಡರ ಸಂಘದ ಜಿಲ್ಲಾಧ್ಯಕ್ಷರಾದ ಮಹೇಶ್ ಹಾಗೂ ಇತರರು ಇದ್ದರು.