ನಾಡುಕಂಡ ಶ್ರೇಷ್ಠ ಸಮಾಜ ಸುಧಾರಕ ಡಿ.ದೇವರಾಜ ಅರಸು

ವಿಜಯಪುರ:ಆ.21: ಡಿ.ದೇವರಾಜ ಅರಸು ಅವರು ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿನಿಲಯಗಳ ಪರಿಕಲ್ಪನೆಯನ್ನು ರಾಜ್ಯಕ್ಕೆ ಕೊಟ್ಟಿದ್ದಾರೆ. ಸಮಾಜಕ್ಕೆ ಅವರ ಕೊಡುಗೆಗಳು ಅಪಾರ ಅದರಲ್ಲೂ ಹಿಂದುಳಿದ ವರ್ಗಗಳ ಏಳ್ಗೆಗೆ ಶ್ರಮಿಸಿದ ಅವರ ಆದರ್ಶಜೀವನ ನಮಗೆ ದಾರಿದೀಪವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

    ತಾಲೂಕಿನ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಡಿ.ದೇವರಾಜ ಅರಸು ಅವರ 108ನೇ ಜಯಂತಿ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು.
 ಕರ್ನಾಟಕ ರಾಜ್ಯದಲ್ಲಿ "ಮೌನ ಸಾಮಾಜಿಕ ಕ್ರಾಂತಿ" ಯನ್ನು ಪ್ರಾರಂಭಿಸಿದ ಅವರು ಬಡವರ ಧ್ವನಿಯಾಗಿದ್ದರು ಮತ್ತು ಸಮಾಜದಲ್ಲಿ ತುಳಿತಕ್ಕೊಳಗಾದವರ ಪರವಾಗಿ ನಿಂತು ಅಭಿವೃದ್ಧಿ ಮಾಡಿದ್ದರು ಎಂದು ಹೇಳಿದರು.
 ಶಾಲಾ ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಡಿ.ದೇವರಾಜ ಅರಸರು ರಾಜ್ಯ ಕಂಡ ಶ್ರೇಷ್ಠ ಸಮಾಜ ಸುಧಾರಕರಲ್ಲಿ ಒಬ್ಬರು. ಅವರ ನೇತೃತ್ವದ ಭೂಸುಧಾರಣೆಗಳು ರಾಜ್ಯಕ್ಕೆ ಮಾದರಿಯಾಗಿವೆ. ಇದು ಶ್ರೀಮಂತ ಮತ್ತು ಬಡವರ ನಡುವಿನ ಕಂದಕವನ್ನು ಕಡಿಮೆ ಮಾಡಿ, ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಿದೆ ಎಂದು ಹೇಳಿದರು.
  ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಮಾತನಾಡಿ,

ಅರಸು ಅವರು ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದ ಸಾಮಾಜಿಕ ಹರಿಕಾರರು.ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಕಲ್ಪಿಸಲು ಅವರು ಸಾಕಷ್ಟು ಶ್ರಮಿಸಿದರು ಎಂದು ಹೇಳಿದರು.

   ಸಂಸ್ಥೆಯ ಕಾರ್ಯದರ್ಶಿ ಸುನಂದಾ ಹುಣಶ್ಯಾಳ,

ದೈಹಿಕ ಶಿಕ್ಷಕ ಎಂ ಎಸ್ ಪಾಪನಾಳಮಠ,ಶಿಕ್ಷಕರಾದ ಜಯಶ್ರೀ ಬಂಗಾರಿ,ಬಸಮ್ಮ ವಡಗೇರಿ, ಮಧುಮತಿ ನಿಕ್ಕಂ,ರೂಪಾ ಶಹಾಪುರ,ರೇಣುಕಾ ಭಜಂತ್ರಿ,ಲಕ್ಷ್ಮೀ, ವೀರೇಶ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.