ನಾಡುನುಡಿ ರಕ್ಷಣೆಗೆ ಸರಕಾರ ಬದ್ದ : ಡಿಸಿಎಂ ಕಾರಜೋಳ

ಬಾಗಲಕೋಟೆ,ನ.2 : ಆಧುನಿಕ ತಂತ್ರಜ್ಞಾನದ ನಾಗಾಲೋಟಕ್ಕೆ ತಕ್ಕಂತೆ ಕನ್ನಡ ಭಾಷೆಯ ಸಾಪ್ಟ್‍ವೇರ್‍ಗಳನ್ನು ಅಭಿವೃದ್ದಿ ಪಡಿಸಿ ಎಲ್ಲ ಕ್ಷೇತ್ರಗಳ ಕುರಿತು ಕನ್ನಡ ಭಾಷೆಯಲ್ಲಿ ಮಾಹಿತಿ ದೊರಕುವಂತೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರವಿವಾರ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ನಮ್ಮ ಸರಕಾರ ಕನ್ನಡ ಭಾಷೆ, ಸಂಸ್ಕøತಿ, ಸಾಹಿತ್ಯ, ಕಲೆ, ಸಂಗೀತದ ಬಗ್ಗೆ ಯುವ ಪೀಳಿಗೆಗೆ ಉತ್ತೇಜನ ನೀಡಲು ಅನೇಕ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಹಿಂದೆ ಕನ್ನಡ ಮತ್ತು ಸಂಸ್ಕøತಿ ಸಚಿವನಾಗಿದ್ದ ಅವಧಿಯಲ್ಲಿ ಅನೇಕ ಗುರುತರವಾದ ಯೋಜನೆಗಳು, ಕಾರ್ಯಕ್ರಮಗಳನ್ನು ರೂಪಿಸಿರುವುದಾಗಿ ತಿಳಿಸಿದರು.
ಈಗಾಗಲೇ ಜಿಲ್ಲೆಗೊಂದು ಸಾಹಿತ್ಯ ಭವನ, ರಂಗಮಂದಿರಗಳನ್ನು ನಿರ್ಮಿಸಲಾಗಿದೆ. ಹಂತ ಹಂತವಾಗಿ ತಾಲೂಕಾ ಕೇಂದ್ರಗಳಲ್ಲಿ ಸಾಹಿತ್ಯ ಭವನ ಹಾಗೂ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಸಾಂಸ್ಕøತಿಕ ಭವನಗಳ ನಿರ್ಮಾಣ ಮಾಡುವುದು ನಮ್ಮ ಸರಕಾರದ ಗುರಿಯಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ 130 ರಂಗಮಂದಿರಗಳನ್ನು ನಿರ್ಮಿಸಲಾಗಿದೆ. ಸಂಕಷ್ಟದಲ್ಲಿದ್ದ ಕಲಾವಿದರ ಪರಿಸ್ಥಿತಿ ಮನಗಂಡು ಮಾಸಾಶನವನ್ನು 1000 ರೂ.ಗಳಿಂದ 1500 ರೂ.ಗಳಿಗೆ ಹೆಚ್ಚಿಸಲಾಗಿದೆ. 1230 ಕಲಾವಿದರಿಗೆ ಮಾಶಾಸನ ಮಂಜೂರು ಮಾಡಲಾಗಿದೆ ಎಂದರು.
ಕೊರೊನಾ ವೈರಸ್ ಹರಡುವಿಕೆಯಿಂದ ಜರ್ಝರಿತಗೊಂಡ ರಾಜ್ಯದ ಜನರಿಗೆ ಅತಿವೃಷ್ಟಿಯಿಂದ ಮತ್ತೊಮ್ಮೆ ಅಘಾತವಾಗಿದೆ. ಜಿಲ್ಲೆಯ ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳ ಭೀಕರ ಪ್ರವಾಹದಿಂದ 31 ಗ್ರಾಮಗಳು ಪ್ರವಾಹ ಹಾಗೂ ಮಳೆಯಿಂದ ಬಾಧಿತಗೊಂಡಿವೆ. ಬಾಧಿತಗೊಂಡ ಒಟ್ಟು 270 ಕುಟುಂಬಗಳಿಗೆ ತಲಾ 10 ಸಾವಿರದಂತೆ ಒಟ್ಟು 27 ಲಕ್ಷ ರೂ. ತುರ್ತು ಪರಿಹಾರ ನೀಡಲಾಗಿದೆ.
ಅಕ್ಟೋಬರ ಮಾಹೆಯಲ್ಲಿ ಸಂಭವಿಸಿದ ಹೆಚ್ಚಿನ ಮಳೆಯಿಂದ ಇಲಕಲ್ಲ ತಾಲೂಕಿನ ಕೆಲೂರ ಗ್ರಾಮದ 250 ಮನೆ, ಹುನಗುಂದ ಪಟ್ಟಣದ 70 ಮನೆ ಸೇರಿ ಒಟ್ಟು 320 ಮನೆಗಳಿಗೆ ಹಳ್ಳದ ನೀರು ನುಗ್ಗಿ ಹಾನಿಯಾಗಿದ್ದು, ತುರ್ತು ಪರಿಹಾರ ತಲಾ ಕುಟುಂಬಕ್ಕೆ 10 ಸಾವಿರದಂತೆ ಒಟ್ಟು 32 ಲಕ್ಷ ರೂ.ಗಳ ಪರಿಹಾರ ವಿತರಿಸಲಾಗಿದೆ. ಹಾನಿಯ ಜಂಟಿ ಸಮೀಕ್ಷೆ ಪ್ರಗತಿಯಲ್ಲಿದ್ದು, ಸಮೀಕ್ಷೆ ಕಾರ್ಯ ಪೂರ್ಣಗೊಂಡ ಮೇಲೆ ಎಲ್ಲ ಫಲಾನುಭವಿಗಳ ಮಾಹಿತಿಯನ್ನು ತಂತ್ರಾಂಶದಲ್ಲಿ ಅಳವಡಿಸಲು ಕ್ರಮವಹಿಸಲಾಗುವುದೆಂದು ತಿಳಿಸಿದರು.
ಕಾರ್ಯಕ್ರಮದ ಪೂರ್ವದಲ್ಲಿ ಕನ್ನಡಾಂಭೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ಅರ್ಪಿಸಿದರು. ಇದೇ ಸಂದರ್ಭದಲ್ಲಿ ಪೊಲೀಸ್ ವಾರಿಯರ್ಸ್‍ಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ, ಜಿ.ಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ತಾ.ಪಂ ಅಧ್ಯಕ್ಷ ಚನ್ನನಗೌಡರ ಪರನಗೌಡರ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಉಪಾಧ್ಯಕ್ಷ ಬಸವರಾಜ ಅವರಾದಿ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಒ ಟಿ.ಭೂಬಾಲನ್, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಎಮ್.ಗಂಗಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.