ಹಿರಿಯ ಲೇಖಕ ಬೆಸಗರಹಳ್ಳಿ ರಾಮಣ್ಣ ಕಥೆ ಆಧರಿಸಿ ಕೃಷ್ಣೇಗೌಡ ನಿರ್ಮಿಸಿ, ನಿರ್ದೇಶಿಸಿರುವ `ನಾನು ಕುಸುಮ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.ಎಲ್ಲಾ ಅಂದುಕೊಂಡಂತೆ ಆದರೆ ಇದೇ ತಿಂಗಾಳಂತ್ಯಕ್ಕೆ ಚಿತ್ರ ತೆರೆಗೆ ಬರಲಿದೆ.
ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುವ ಹುಡುಗಿಯೊಬ್ಬಳು ಅಲ್ಲಿ ಅನುಭವಿಸುವ ಶೋಷಣೆಗಳ ಸುತ್ತ ್ತ `ನಾನು ಕುಸುಮ’ ಚಿತ್ರದ ಕಥೆ ಸಾಗಲಿದೆ. ಗ್ರೀಷ್ಮಾ ಶ್ರೀಧರ್, ಸನಾತನಿ ಜೋಶಿ, ಕಾವ್ಯಾ ಶ್ರೀಧರ್, ಕೃಷ್ಣೇಗೌಡ, ಸೌಮ್ಯ ಭಾಗವತ್, ಪ್ರತಿಭ ಸಂಶಿಮಠ್, ವಿಜಯ್ ಮೊದಲಾದವರು `ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಬಾರಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ಪ್ರದರ್ಶನಗೊಂಡು ಪ್ರಥಮ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದುಕೊಂಡಿರುವ `ನಾನು ಕುಸುಮ’ ಈಗಾಗಲೇ `ಇಂಡಿಯನ್ ಪನೋರಮಾ’, `ರಾಜಸ್ಥಾನ್ ಫಿಲಂ ಫೆಸ್ಟಿವಲ್’, `ತ್ರಿಶೂರ್ ಫಿಲಂ ಫೆಸ್ಟಿವಲ್’ ಹೀಗೆ ಹಲವು ಪ್ರತಿಷ್ಠಿತ ಚಲನ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಹಲವು ಪ್ರಶಸ್ತಿ, ಪ್ರಶಂಸೆ ತನ್ನದಾಗಿಸಿಕೊಂಡಿದೆ.
ಬೆಂಗಳೂರು ಸುತ್ತಮುತ್ತ `ನಾನು ಕುಸುಮ’ ಸಿನಿಮಾದ ಚಿತ್ರೀಕರಣ ನಡೆಸಲಾಗಿದೆ. ಆಸ್ಪತ್ರೆ, ವಾರ್ಡ್, ಗಲ್ಲಿ, ಮನೆ… ಹೀಗೆ ಸಿನಿಮಾದಲ್ಲಿ ಬರುವ ಎಲ್ಲ ಸ್ಥಳಗಳನ್ನು ನೈಜ ಲೊಕೇಶನ್ ಗಳಲ್ಲೇ ಚಿತ್ರೀಕರಿಸಲಾಗಿದ್ದು, ಸಿಂಕ್ ಸೌಡ್ ನಲ್ಲಿ ಹಿನ್ನೆಲೆ ಧ್ವನಿಗ್ರಹಣ ಮಾಡಿರುವುದು ಸಿನಿಮಾದ ಮತ್ತೊಂದು ವಿಶೇಷತೆ. ಅರ್ಜುನ್ ರಾಜಾ ಛಾಯಾಗ್ರಹಣವಿದೆ.