ನಾನು ಯಾವುದೇ ಪಕ್ಷ ಸೇರಿಲ್ಲ: ಗಂಗೀರೆಡ್ಡಿ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.26:  ನಗರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದೆ.  ಆದರೆ ನನ್ನ ವಯಕ್ತಿಕ ಕಾರಣಗಳಿಂದ ನನ್ನ ನಾಮಪತ್ರವನ್ನು ವಾಪಸ್ಸು ಪಡೆದಿರುತ್ತೇನೆ ಎಂದು ಗಂಗೀರೆಡ್ಡಿ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ನಾಮ ಪತ್ರ ಹಿಂದಕ್ಕೆ ಪಡೆದಿರುವ ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ ಆದರೆ  ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ ಎಂದು ಕೆಲವರು ವದಂತಿ ಹಬ್ಬಿಸುತ್ತಿದ್ದಾರೆ.
ಸಧ್ಯ ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ. ಮುಂದಿನ ದಿನಗಳಲ್ಲಿ ನನಗೆ ಇಷ್ಟವಾದ ಅಭ್ಯರ್ಥಿಗೆ ಬೆಂಬಲ ನೀಡಿ ಅವರ ಪರವಾಗಿ ಪ್ರಚಾರ ಮಾಡುತ್ತೇನೆಂದು ಸ್ಪಷ್ಟನೆ ನೀಡಿದ್ದಾರೆ‌