ನಾನು ಸಚಿವ ಸ್ಥಾನದ ಆಕಾಂಕ್ಷಿ: ಕರುಣಾಕರರೆಡ್ಡಿ

ಹರಪನಹಳ್ಳಿ ನ 21 : ರಾಜ್ಯ ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಹರಪನಹಳ್ಳಿ ಬಿಜೆಪಿ ಶಾಸಕ ಶಾಸಕ ಜಿ.ಕರುಣಾಕರರೆಡ್ಡಿ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಳೆದ 26 ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷಕ್ಕೆ ಸೇವೆ ಸಲ್ಲಿಸಿದ್ದೇನೆ. ಈ ಹಿಂದೆ ಕಂದಾಯ ಸಚಿವನಾಗಿ ಕೆಲಸ ಮಾಡಿರುವ ಅನುಭವದೊಂದಿಗೆ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲು ಬದ್ಧನಾಗಿದ್ದೇನೆ. ನನಗೂ ಸಚಿವನಾಗುವ ಆಸೆಯಿದ್ದು, ಪಕ್ಷ ಕೈಗೊಳ್ಳುವ ನಿರ್ಧಾರಕ್ಕೆ ಬದ್ದನಾಗಿರುತ್ತೇನೆ ಎಂದರು.
ಹರಪನಹಳ್ಳಿಯನ್ನು ಜಿಲ್ಲೆ ಘೋಷಣೆ ಮಾಡುವ ಸಂಬಂಧ ನನ್ನ ರಾಜೀನಾಮೆಗೆ ಕೆಲವರು ಒತ್ತಾಯ ಮಾಡುತ್ತಿದ್ದಾರೆ. ಆದರೆ ನಾನು ರಾಜೀನಾಮೆ ನೀಡುವುದಿಲ್ಲ. ರಾಜೀನಾಮೆ ಸಮಸ್ಯೆ ಪರಿಹಾರಕ್ಕೆ ಉತ್ತರವಲ್ಲ. ರಾಜೀನಾಮೆಯಿಂದ ಯಾವ ಸಾಧನೆಯೂ ಆಗುವುದಿಲ್ಲ, ಅದಿಕಾರದಲ್ಲಿದ್ದುಕೊಂಡು ಹರಪನಹಳ್ಳಿಯನ್ನು ಜಿಲ್ಲಾ ಕೆಂದ್ರವನ್ನಾಗಿಸಲು ಹೋರಾಟ ನಡೆಸುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.