ನಾನೂ ಬಳ್ಳಾರಿ ಟಿಕೆಟ್ ಆಕಾಂಕ್ಷಿ: ರಫೀಕ್


(ಸಂಜೆವಾಣಿ ವಾರ್ತೆ)
ಬಳ್ಳಾರಿ, ನ.17: ಮುಂಬರುವ ವಿಧಾನಸಭಾ  ಚುನಾವಣೆಗೆ ಸ್ಪರ್ಧೆ ಮಾಡಲು ಬಳ್ಳಾರಿ ನಗರ ಕ್ಷೇತ್ರದಿಂದ ಟಿಕೆಟ್ ಬಯಸುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಹಾಲಿ ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಜಿ.ಎಸ್.ಮಹಮ್ಮದ್ ರಫೀಕ್ ಅವರು ಬಳ್ಳಾರಿ ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿ ನಿನ್ನೆ  ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ.
ನಾನು ಅನೇಕ ವರ್ಷಗಳಿಂದ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತನಾಗಿ, ತಳ ಮಟ್ಟದಿಂದ ಅನೇಕ ಹುದ್ದೆಗಳನ್ನು ನಿರ್ವಹಿಸಿದ್ದು, ಪ್ರಸ್ತುತ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷನಾಗಿ ಪಕ್ಷಕ್ಕೆ ನಿಷ್ಟಾಯಿಂದ ಸೇವೆಯನ್ನು ಸಲ್ಲಿಸುತ್ತಿದ್ದೇನೆ.
ಈ ಎಲ್ಲಾ ಕಾರಣಗಳಿಂದ ಪಕ್ಷಕ್ಕೆ ಹಾಗೂ ಜನರಿಗೆ ಸೇವೆಯನ್ನು ಮಾಡಲು  ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್     ಕೋರಿರುವುದಾಗಿ ಹೇಳಿದ್ದಾರೆ
 ಅರ್ಜಿ ಸಲ್ಲಿಸುವ  ಸಂಧರ್ಭದಲ್ಲಿ  ಬಳ್ಳಾರಿ ಜಿಲ್ಲಾ ನಗರ ಕಾಂಗ್ರೆಸ್ ಸಮಿತಿಯ ಐ.ಎನ್.ಟಿ.ಯು.ಸಿ ಅಧ್ಯಕ್ಷ  ಕೆ.ತಾಯಪ್ಪ ಮತ್ತಿತರರು ಇದ್ದರು