ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಸುಳ್ಯ, ಜ.೧೦- ಕಳೆದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಳ್ಯ ಕೊಶಮಟ್ಟಂ ಸಂಸ್ಥೆಯ ಉದ್ಯೋಗಿಯಾಗಿದ್ದ ಪ್ರಮೋದ್ ಕುಂಟುಕಾಡು(೨೭) ಮೃತದೇಹವು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಪ್ರಮೋದ್ ನಾಪತ್ತೆಯಾಗಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮನೆ ಬಳಿಯೇ ಅವರ ಬೈಕ್ ಪತ್ತೆಯಾಗಿದ್ದರೂ ಪ್ರಮೋದ್ ಪತ್ತೆಯಾಗಿರಲಿಲ್ಲ. ಪಕ್ಕದ ಕಾಡು ಸೇರಿದಂತೆ ಹಲವೆಡೆ ಹುಡುಕಾಟ ನಡೆಸಲಾಗಿತ್ತಾದರೂ ಪತ್ತೆಯಾಗಿರಲಿಲ್ಲ. ಬೆಳಿಗ್ಗೆ ಮತ್ತೆ ಹುಡುಕಾಟ ನಡೆಸಿದಾಗ ಅವರು ಬೈಕ್ ನಿಲ್ಲಿಸಿದ ಸ್ವಲ್ಪ ದೂರದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿದೆ. ಮೃತರು ತಂದೆ, ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.