ನಾಮಪತ್ರ ಸಲ್ಲಿಕೆ ಟ್ರಾಫಿಕ್ ಜಾಮ್ ವಾಹನ ಸವಾರರು ಪರದಾಟ

oplus_2

ರಾಯಚೂರು, ಏ.೧೮- ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸುವ ಹಿನ್ನಲೆ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಸೇರಿರುವದರಿಂದ ಟ್ರಾಫಿಕ್ ಸಮಸ್ಯೆ ಉಂಟಾಯಿತು. ಎರಡು ರಾಷ್ಟ್ರಿಯ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸುಮಾರು ೨೦೦ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಭಾರೀ ಪೊಲೀಸ್ ಬಂದ್ ಬಸ್ತ್ ವ್ಯವಸ್ಥೆ ಮಾಡಲಾಗಿದೆ. ಪಕ್ಷದ ಅಭ್ಯರ್ಥಿಗಳು ಮೆರವಣಿಗೆಯ ಮೂಲಕ ಜಿಲ್ಲಾಧಿಕಾರಿ ಕಚೇರಿ ಆಗಮಿಸುವ ಹಿನ್ನಲೆ ಕಾರ್ಯಕರ್ತರು ಮತ್ತು ಬೆಂಬಲಗರು ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಭಾರೀ ಸಂಖ್ಯೆಯಲ್ಲಿ ಮುಂಚಿತವಾಗಿ ನೆರೆದಿರುವದರಿಂದ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ರಸ್ತೆ ನೆರೆ ಜಿಲ್ಲೆಗಳಿಗೆ ಹೋಗುವ ಪ್ರಮುಖ ರಸ್ತೆ ಆಗಿರುವದಿಂದ ಈ ರಸ್ತೆಯಲ್ಲಿ ವಾಹನ ಸಾವರರು ಟ್ರಾಫಿಕ್ ಸಮಸ್ಯೆಗೆ ಪರದಾಡುವಂತ ಪರಿಸ್ಥಿತಿ ಎದುರಾಯಿತು. ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೩ ಗಂಟೆವೆರೆಗೆ ಟ್ರಾಫಿಕ್ ಸಮಸ್ಯೆ ಉಂಟಾಯಿತು. ಪೊಲೀಸರು ಟ್ರಾಫಿಕ್ ಸಮಸ್ಯೆಯನ್ನು ನಿಭಾಯಿಸಲು ಹರಸಾಹಸ ಪಟ್ಟರು.