ನಾಮಪತ್ರ ಸಲ್ಲಿಸಿದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ,ಏ.೧೩-ಮೇ೧೦ ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ದಿಸಲು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾಕ್ಟರ್ ಕೆ ಸುಧಾಕರ್ ರವರು ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ಚಿಕ್ಕಬಳ್ಳಾಪುರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಡಾಕ್ಟರ್ ಕೆ ಸುಧಾಕರ್ ಅವರು ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ನಾಲ್ಕನೇ ಬಾರಿಗೆ ವಿಧಾನಸೌಧ ಪ್ರವೇಶಿಸಲು ನಾಮಪತ್ರ ಸಲ್ಲಿಸುತ್ತಿದ್ದು ಅತ್ಯಧಿಕ ಬಹುಮತದಿಂದ ಗೆಲ್ಲುವ ವಿಶ್ವಾಸ ನನಗಿದೆ ಎಂದರು.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜನತೆಗೂ ಮತ್ತು ನನಗೂ ಅವಿನಾಭಾವ ಸಂಬಂಧ ಇದೆ ಈ ಸಂಬಂಧವನ್ನು ಕಡೆಗಣಿಸಲು ಯಾವ ಶಕ್ತಿಗೂ ಸಹ ಸಾಧ್ಯವಿಲ್ಲ ಎಂದರ್ ಅಲ್ಲದೆ ನನಗೆ ಈ ಚುನಾವಣೆಯಲ್ಲಿ ಪ್ರತಿಸ್ಪರ್ಧೆ ಕಾಣುತ್ತಿಲ್ಲ ಎಂದರು.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಮೂರು ಅವಧಿಯಲ್ಲಿ ನಾನು ಶಾಸಕರಾಗಿದ್ದ ಅವಧಿಯಲ್ಲಿ ಹಾಗೂ ಸಚಿವನಾಗಿದ್ದ ಅವಧಿಯಲ್ಲಿ ಕೈಗೊಂಡಿರುವ ಅನೇಕ ಜನಪರ ಕಾರ್ಯಕ್ರಮಗಳು ನನ್ನನ್ನು ಆಶೀರ್ವದಿಸಲಿದೆ ಹಾಗೂ ಮುಂದಿನ ದಿನಗಳಲ್ಲಿಯೂ ಸಹ ಚಿಕ್ಕಬಳ್ಳಾಪುರವನ್ನು ಸರ್ವತಮುಖವಾಗಿ ಅಭಿವೃದ್ಧಿ ಮಾಡಲು ನನಗೆ ಗೆಲುವನ್ನು ನನ್ನ ಕ್ಷೇತ್ರದ ಜನತೆ ಕೊಡುತ್ತಾರೆ ಎಂದರು
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಲಿಷ್ಠವಾದ ಮತ್ತು ಸದೃಢವಾದ ಸರ್ಕಾರ ಅಧಿಕಾರಕ್ಕೆ ಬರಲಿದ್ದು ಮೊದಲನೆಯ ಪಟ್ಟಿಯಲ್ಲಿ ಪ್ರಕಟಗೊಂಡಿರುವ ಸ್ಥಾನಗಳಲ್ಲಿಯೇ ಬಿಜೆಪಿಗೆ ಸರಳ ಬಹುಮತ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ಕೆವಿ ನವೀನ್ ಕಿರಣ್ ಮಹಾಕಾಳಿ ಬಾಬು ಕೋಲಾಟ್ಲು ಮಂಜುನಾಥ್ ಒಳಗೊಂಡಂತೆ ಮತ್ತಿತರರು ಹಾಜರಿದ್ದರು.
ಡಾಕ್ಟರ್ ಕೆ ಸುಧಾಕರ್ ಅವರು ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಅವರ ತಂದೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಪಿಎನ್ ಕೇಶವ ರೆಡ್ಡಿ ಡಾ. ಸುಧಾಕರ್ ರವರ ಪತ್ನಿ ಸಹ ಹಾಜರಿದ್ದು ಶುಭಕೋರಿದರು.