
ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಮೇ.14: ಬೇಸಿಗೆ ಶಿಬಿರ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ,ಆತ್ಮವಿಶ್ವಾಸ, ಸೃಜನಶೀಲತೆ,ಕಲ್ಪನಾಶಕ್ತಿ,ಆಲೋಚನಾಶಕ್ತಿ ಹಾಗೂ ವೈಜ್ಞಾನಿಕ ಮನೋಭಾವ ಬೆಳಸಿಕೊಳ್ಳಲು ಸಹಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ರವಿಚೇಳ್ಳಗುರ್ಕಿ ಹೇಳಿದರು.
ತಾಲ್ಲೂಕಿನ ಸಂಜೀವರಾಯನಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು ಕ್ರಾಪ್ಟ್,ಚಿತ್ರಕಲೆ,ಕ್ರೀಡೆ, ಧ್ಯಾನ, ಹಾಡು ಹಾಗೂ ನೃತ್ಯದಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಕಲೆಗಳು ಹೊರಬರಲು ಸಾಧ್ಯ ಎಂದರು.
ಶಿಕ್ಷಕರಾದ ರಾಮಾಂಜಿನೇಯ ಹಾಗೂ ಜೂಲ್ ರಮೇಶ,ಗುರುಪ್ರಸಾದ್ ವಿದ್ಯಾರ್ಥಿಗಳಿಗೆ ಕ್ರಾಪ್ಟ್ ಹಾಗೂ ಎನ್. ಸಿ.ಸಿ ಬಗ್ಗೆ ತರಬೇತಿ ನೀಡಿದರು.
ಮೂವತ್ತಕ್ಕೂ ಹೆಚ್ಚು ಮಕ್ಕಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.