ನಾಯಕನಾಗಿ ಅದೃಷ್ಠ ಮುಂದಾದ ಚಿಕ್ಕಣ್ಣ

ಹಾಸ್ಯ ನಟ  ಚಿಕ್ಕಣ್ಣ “ಉಪಾಧ್ಯಕ್ಷ” ಚಿತ್ರದ ಮೂಲಕ ನಾಯಕನಾಗಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಸ್ಮಿತಾ ಉಮಾಪತಿ ಹಾಗೂ ನಿರ್ಮಲ ಶ್ರೀನಿವಾಸ್  ನಿರ್ಮಿಸುತ್ತಿರುವ ಚಿತ್ರಕ್ಕೆ ಮಾತಿನ ಜೋಡಣೆ ನಡೆಯುತ್ತಿದೆ. ಅನಿಲ್ ಕುಮಾರ್ ಚಿತ್ರ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಮೈಸೂರು, ಚಿಕ್ಕಮಗಳೂರು, ಮೂಡಿಗೆರೆ ಮುಂತಾದ ಕಡೆ ಐವತ್ತಕ್ಕೂ ಅಧಿಕ ದಿನಗಳ ಚಿತ್ರೀಕರಣ ನಡೆದಿದೆ.

ಚಿಕ್ಕಣ್ಣ ಅವರಿಗೆ ನಾಯಕಿಯಾಗಿ ಮಲೈಕ ನಟಿಸುತ್ತಿದ್ದಾರೆ. ಸಾಧುಕೋಕಿಲ, ರವಿಶಂಕರ್, ವೀಣಾಸುಂದರ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಅರ್ಜುನ್ ಜನ್ಯ ಸಂಗೀತ, ಶೇಖರ್ ಚಂದ್ರ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನವಿದೆ.