ನಾರಾಯಣಗೌಡರ ಬಿಡುಗಡೆಗೆ ಕರವೇ ಒತ್ತಾಯ

ಔರಾದ : ಡಿ.31:ಕನ್ನಡ ಭಾಷೆ ರಕ್ಷಣೆಗಾಗಿ ಹೋರಾಟ ಮಾಡುತ್ತಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರನ್ನು ಬಂಧಿಸಿರುವುದು ಖಂಡನೀಯ ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ತಾಲ್ಲೂಕು ಕರವೇ ಅಧ್ಯಕ್ಷ ಅನಿಲ ಬೆಲೂರೆ ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಕನ್ನಡ ಭಾಷೆಯೇ ಪ್ರಧಾನವಾಗಬೇಕು. ಶಾಲಾ-ಕಾಲೇಜು, ಸರ್ಕಾರಿ ಕಚೇರಿ, ಅಂಗಡಿ, ಮಳಿಗೆ, ಹೋಟೆಲ್, ಮಾಲ್, ಥಿಯೇಟರ್,
ಕಂಪನಿ ಸೇರಿದಂತೆ ಇತ್ಯಾದಿ ಅಂಗಡಿ ಮುಂಗಟ್ಟುಗಳ ನಾಮ ಫಲಕಗಳು ಶೇ.60ರಷ್ಟು ಕನ್ನಡದಲ್ಲಿಯೇ ಬರೆಯಿಸಬೇಕೆಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಆದರೆ, ರಾಜ್ಯ ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಬಹುತೇಕರು ನಿಯಮ ಉಲ್ಲಂಘಿಸಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ ಅನ್ಯ ಭಾಷೆ ನಾಮ ಫಲಕ ಹಾಕುವ ಮೂಲಕ ಕನ್ನಡಕ್ಕೆ ಅವಮಾನಿಸುತ್ತಿದ್ದಾರೆ.

ಕರ್ನಾಟಕದಲ್ಲಿ ಕನ್ನಡಿಗನೆ ಸಾರ್ವಭೌಮ, ಎಲ್ಲ ಅಂಗಡಿ ಮುಂಗಟ್ಟುಗಳ ನಾಮ ಫಲಕವನ್ನು 60:40 ರಂತೆ ಕನ್ನಡದಲ್ಲಿ ಅಳವಡಿಸಬೇಕು ಎಂದು ಸರ್ಕಾರದ ಸುತ್ತೋಲೆ ಇದ್ದರು ಸಹ ಅದನ್ನು ನಿರ್ಲಕ್ಷಿಸಿ ಅನ್ಯ ಭಾಷೆಗೆ ಮಣೆ ಹಾಕಿ ಕನ್ನಡದ ಕಗ್ಗೊಲೆ ಮಾಡುತ್ತಿದ್ದಾರೆ ಅದರ ವಿರುದ್ಧ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರು ಹೋರಾಟ ನಡೆಸುತ್ತಿದ್ದಾರೆ, ಆದರೆ, ಅವರನ್ನು ಏಕಾಏಕಿ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿರುವುದು ಸರಿಯಲ್ಲ. ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಔರಾದ ಕರವೇ ತಾಲೂಕು ಅಧ್ಯಕ್ಷ ಅನಿಲ ಬೆಲೂರೆ ಪತ್ರಿಕಾ ಪ್ರಕಟಣೆಯ ಮೂಲಕ ಒತ್ತಾಯಿಸಿದ್ದಾರೆ.