ನಾರಾ ಭರತ್ ರೆಡ್ಡಿಗೆ ಉತ್ತಮ ರಫ್ತುದಾರ ಪ್ರಶಸ್ತಿ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಜು.23: ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಿನ್ನೆ    ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಯಿಂದ ಏರ್ಪಡಿಸಿದ್ದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ
ನಗರದ  ಶ್ರೀ.ರಾಘವೇಂದ್ರ ಎಂಟರಪ್ರೈಸಸ್ ನ ಕಾರ್ಯನಿರ್ವಾಹಕ ನಿರ್ದೇಶಕ,  ಶಾಸಕ ನಾರಾ ಭರತ್ ರೆಡ್ಡಿ ಅವರಿಗೆ ಉತ್ತಮ ರಫ್ತುದಾರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ  ಪ್ರಶಸ್ತಿ ನೀಡಿದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್,  ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ , ಕೈಗಾರಿಕಾ ಇಲಾಖೆಯ ಕಾರ್ಯದರ್ಶಿ ಸೆಲ್ವಂ ಮೊದಲಾದವರು ಇದ್ದರು.
ಈ ಹಿಂದೆ ಭರತ್ ರೆಡ್ಡಿ ಅವರು ಈ ಪ್ರಶಸ್ತಿಯನ್ನು ಪಡೆಯುತ್ತಿದ್ದರು. ಈಗ ಮಗ ಪಡೆದಿದ್ದಾನೆ.