ನಾಲವಾರಕರ್ ರಾಜಿನಾಮೆ

ಕಲಬುರಗಿ,ಮೇ 15: ದಕ್ಷಿಣಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ದತ್ತಾತ್ರೇಯ ಪಾಟೀಲ ರೇವೂರ ಸೋಲಿನ ಹೊಣೆ ಹೊತ್ತು ಬಿಜೆಪಿ ದಕ್ಷಿಣಮಂಡಳದ ಮಾಧ್ಯಮ ವಕ್ತಾರ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿರುವದಾಗಿ ಮಂಜುನಾಥ ನಾಲವಾರಕರ್ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ದಕ್ಷಿಣ ಮತಕ್ಷೇತ್ರದ ಜನಪ್ರಿಯ ಶಾಸಕರಾಗಿ, ಕೆಕೆಆರ್ ಡಿಬಿ ಅಧ್ಯಕ್ಷರಾಗಿ ದತ್ತಾತ್ರೇಯ ಪಾಟೀಲ ರೇವೂರ ಅವರು ಸತತವಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ.ಆದರೂ 2023 ರ ವಿಧಾನಸಭಾ ಚುನಾವಣೆಯಲ್ಲಿ ಅವರ ಸೋಲಾಗಿದೆ.ಕ್ಷೇತ್ರದ ಜನರ ಜನಾದೇಶಕ್ಕೆ ನಾವು ತಲೆ ಬಾಗುತ್ತೇವೆ.
ಇನ್ನು ಮುಂದೆ ಈ ಭಾಗದ ಅಭಿವೃದ್ಧಿಗಾಗಿ ಅನೇಕ ಹೋರಾಟದಲ್ಲಿ ತೊಡಗಿಸಿಕೊಂಡು ,ರೇವೂರ ಅವರ ಅಭಿಯಾನಿಯಾಗಿ ಮುಂದುವರೆಯುತ್ತೇನೆ ಎಂದು ಅವರು ತಿಳಿಸಿದರು.