ನಾಲೆಗಳಲ್ಲಿ ಅಕ್ರಮವಾಗಿ ನೀರು ತೆಗೆಯಲು ಬಳಸುತ್ತಿದ್ದ ಪಂಪ್‍ಗಳ ವಶ

ಸಂಜೆವಾಣಿ ವಾರ್ತೆ

ದಾವಣಗೆರೆ, ನ. ೩:  ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಬೆಳೆಗಳಿಗೆ ಕೊನೆಯ ಹಂತದ ನೀರು ಕೊಡಬೇಕಾಗಿರುವುದರಿಂದ ಭದ್ರಾ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್‍ಸೆಟ್‍ಗಳನ್ನು ತೆರವುಗೊಳಿಸಿ, ಅಂತಹ ಪಂಪ್‍ಸೆಟ್‍ಗಳಿಗೆÉ ಸರಬರಾಜಾಗುವ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ದಾವಣಗೆರೆ ಹೊನ್ನಾಳಿ ರಸ್ತೆಯಲ್ಲಿರುವ ಅರಳೀಪುರ, ಯಲೋದಹಳ್ಳಿ ಹಾಗೂ ಇನ್ನಿತೆರೆ ಪ್ರದೇಶಗಳ ಕಾಲುವೆ, ನಾಲೆಗಳಲ್ಲಿ ಅಕ್ರಮವಾಗಿ ನೀರು ತೆಗೆಯಲು ಬಳಸುತ್ತಿದ್ದ ಪಂಪ್‍ಗಳನ್ನು ತೆರವುಗೊಳಿಸಲಾಗಿದೆ.ನೀರಾವರಿ ಇಲಾಖೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.