ನಾಲ್ಕನೇ ದಿನದಂದು ಮೂವರು ಅಭ್ಯರ್ಥಿಗಳಿಂದ 3 ನಾಮಪತ್ರಗಳು ಸಲ್ಲಿಕೆ

ಕಲಬುರಗಿ:ಏ.17:ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ನಾಲ್ಕನೇ ದಿನವಾದ ಬುಧವಾರದಂದು ಮೂವರು ಅಭ್ಯರ್ಥಿಗಳಿಂದ 3 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿವೆ. ಉತ್ತಮ ಪ್ರಜಾಕೀಯ ಪಾರ್ಟಿಯ ಅಭ್ಯರ್ಥಿಯಾಗಿ ನಾಗೇಂದ್ರ ಎಚ್. ಹನುಮಂತಪ್ಪ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ವಿಜಯ ಗೋವಿಂದ ಜಾಧವ ಹಾಗೂ ಭಾರತೀಯ ಬಹುಜನ ಕ್ರಾಂತಿ ದಳ ಪಕ್ಷದ ಅಭ್ಯರ್ಥಿಯಾಗಿ ರಾಜ್‍ಕುಮಾರ್ ಗೋಪಿನಾಥ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಏಪ್ರಿಲ್ 19 ರಂದು ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುವುದು. ನಾಮಪತ್ರಗಳನ್ನು ಹಿಂದಕ್ಕೆ ಪಡೆಯುವ ಕೊನೆಯ ದಿನ ಏಪ್ರಿಲ್ 22 ಇರುತ್ತದೆ. ಇಲ್ಲಿಯವರೆಗೆ 10 ಅಭ್ಯರ್ಥಿಗಳಿಂದ 14 ನಾಮಪತ್ರಗಳು ಸಲ್ಲಿಸಿದಂತಾಗಿದೆ.