ನಾಲ್ವರು ಕೋವಿಡ್ ಸೋಂಕಿತರ ಸಾವು

ವಿಜಯಪುರ, ಏ.30-ಜಿಲ್ಲೆಯಲ್ಲಿ ನಾಲ್ವರು ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಅವರು ತಿಳಿಸಿದ್ದಾರೆ.
ಕೋವಿಡ್ ಸೋಂಕಿತ 68 ವರ್ಷ ವಯೋಮಾನದ ಪುರುಷ ರೋಗಿ ಸಂಖ್ಯೆ 1146379 ಅವರು ಮೃತಪಟ್ಟಿದ್ದಾರೆ.ಅವರು ಕೆಮ್ಮು, ತೀವ್ರ ಉಸಿರಾಟ ತೊಂದರೆಯಿಂದ ಬಳಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಅದರಂತೆ 75 ವರ್ಷದ ವೃದ್ಧ ರೋಗಿ ಸಂಖ್ಯೆ 1218060ಮೃತ ಪಟ್ಟಿದ್ದು,ಇವರು ಕೆಮ್ಮು, ತೀವ್ರ ಉಸಿರಾಟ ತೊಂದರೆ, ರಕ್ತದೊತ್ತಡ, ಸಕ್ಕರೆ ಖಾಯಿಲೆಯಿಂದ ಬಳಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇವರು ಮೃತಪಟ್ಟಿದ್ದಾರೆ. ಅದರಂತೆ 47 ವರ್ಷ ದ ಮಹಿಳೆ ರೋಗಿ ಸಂಖ್ಯೆ 1250624 ಜಿಲ್ಲಾ ಆಸ್ಪತ್ರೆಗೆ ತೀವ್ರ ಶ್ವಾಸಕೋಶ ತೊಂದರೆಯಿಂದ ದಾಖಲಾಗಿದ್ದರು. ಮೃತ ಪಟ್ಟಿದ್ದು, ಇನ್ನೋರ್ವ 50ವರ್ಷದ ರೋಗಿ ಸಂಖ್ಯೆ 1277963 ತೀವ್ರ ಶ್ವಾಸಕೋಶ ತೊಂದರೆ ಯಿಂದ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರೆಲ್ಲರ ಅಂತ್ಯ ಸಂಸ್ಕಾರವನ್ನು ಶಿಷ್ಠಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.