ನಾಲ್ವರು ಬೈಕ್​ ಕಳ್ಳರ ಬಂಧಿಸಿದ ಪೊಲೀಸರು

ಕಲಬುರಗಿ:ಜೂ.8: ಲಾಕ್‌ಡೌನ್ ಸಂದರ್ಭದಲ್ಲಿ ಅನಾವಶ್ಯಕವಾಗಿ ಬೈಕ್ ಮೇಲೆ ಓಡಾಡುತ್ತಿದ್ದ 4 ಜನ ಬೈಕ್ ಕಳ್ಳರನ್ನು ಬಂಧಿಸುವಲ್ಲಿ ಎಂಬಿ ನಗರ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಹಮ್ಮದ್ ಮುಕ್ರಂ, ಮೊಹಮ್ಮದ್ ತಬ್ರೆಜ್, ಖಾಜಾಖಾನ್ ಹಾಗೂ ಸೈಯದ್ ಸಲೀಂ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳಿಂದ 4.4 ಲಕ್ಷ ಮೌಲ್ಯದ 11 ಬೈಕ್​​​ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಲಬುರಗಿ ನಗರದ ವಿವಿಧ ಬಡಾವಣೆಗಳಲ್ಲಿ ಬೈಕ್​ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳು, ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಅನಾವಶ್ಯಕವಾಗಿ ಬೈಕ್​ಗಳಲ್ಲಿ ಓಡಾಡುತ್ತಿದ್ದರು. ಈ ವೇಳೆ, ಇವರನ್ನು ತಡೆದು ದಾಖಲಾತಿ ಪರಿಶೀಲನೆಗೆ ಪೊಲೀಸರು ಮುಂದಾದಾಗ ಆರೋಪಿಗಳ ನಿಜವಾದ ಬಣ್ಣ ಬಯಲಾಗಿದೆ.
ನಾಲ್ವರನ್ನು ಬಂಧಿಸಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಎಂಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.