ನಾಳಿನ ಕೆ-ಸೆಟ್ ಪರೀಕ್ಷೆ ರದ್ದು

ಮೈಸೂರು,ಏ.೧೦- ನಾಳೆ ನಡೆಯಬೇಕಾಗಿದ್ದ ಕೆ-ಸೆಟ್ ಪರೀಕ್ಷೆ ರದ್ದಾಗಿದೆ. ಯುಜಿಸಿ ಮಾರ್ಗಸೂಚಿಯಂತೆ ನಾಳೆ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ನಡೆಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು.
ಆದರೆ, ಕಾರಣಾಂತರಗಳಿಂದ ಕೆ-ಸೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಮೈಸೂರು ವಿವಿ ಕೆ-ಸೆಟ್ ಸಂಯೋಜಕ ಪ್ರೊ. ಹೆಚ್. ರಾಜಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂದಿನ ಕೆಸೆಟ್ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಎಲ್ಲ ನೋಂದಾಯಿತ ಅಭ್ಯರ್ಥಿಗಳು ಕೆಸೆಟ್-೨೦೨೧ಪರೀಕ್ಷೆಗೆ ಸಂಬಂಧಿಸಿದಂತೆ ವೆಬ್‌ಸೈಟ್ ವೀಕ್ಷಿಸುವಂತೆ ಮನವಿ ಮಾಡಿದ್ದಾರೆ.