ನಾಳಿನ ಭಾರತ್ ಬಂದ್ ಗೆ ವಿವಿಧ ಸಂಘಟನೆಗಳ ಬೆಂಬಲ

ಹುಬ್ಬಳ್ಳಿ,ಮಾ25: ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರಕಾರ ಜಾರಿಗೊಳಿಸಲು ಮುಂದಾಗುತ್ತಿದ್ದು, ಇದರ ವಿರುದ್ಧ ರೈತ ಸಂಘಟನೆಗಳು ನಾಳೆ ಭಾರತ ಬಂದ್‍ಗೆ ಕರೆನೀಡಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ವಿವಿಧ ಸಂಘಟನೆಗಳು ಬೆಂಬಲ ಸೂಚಿಸುವ ನಿರ್ಧಾರ ಕೈಗೊಂಡವು. ಇಲ್ಲಿನ ಸರ್ಕಿಟ್ ಹೌಸ್‍ನಲ್ಲಿ ರೈತ, ದಲಿತ ಕನ್ನಡ ಪರ ಸಂಘಟನೆಗಳು ಉಳಿದ ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಯಿತು ಎಂದು ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯ ಅಧ್ಯಕ್ಷ ಸಿದ್ದಣ್ಣ ತೇಜಿ ತಿಳಿಸಿದರು.
ಈ ವೇಳೆ ಮಾತನಾಡಿದ ಅವರು, ಭಾರತ್ ಬಂದ್ ಯಶಸ್ವಿಗೊಳಿಸಲು ಎಲ್ಲ ಸಂಘಟನೆಗಳು ಒಗ್ಗಟ್ಟಾಗಿ ಬೆಂಬಲ ನೀಡಲಿದ್ದಾರೆ.
ನಾಳೆ ಬೆಳಿಗ್ಗೆ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಘಟಕಗಳಿಗೆ ತೆರಳಿ ಸಾರಿಗೆ ಸೇವೆ ಸ್ಥಗಿತಗೊಳಿಸುವಂತೆ ಮನವಿ ಮಾಡಲಾಗುವುದು. ಅಲ್ಲದೆ ಎ.ಪಿಎಂ.ಸಿ ಸೇರಿದಂತೆ ವಿವಿಧ ಮಾರುಕಟ್ಟೆಗಳ ವ್ಯಾಪಾರ ವಹಿವಾಟುಗಳನ್ನು ಸ್ಥಗಿತ ಮಾಡಲಾಗುವುದು ಎಂದು ತಿಳಿಸಿದರು.
ಭಾರತ್ ಬಂದ್ ಹಿನ್ನೆಲೆಯಲ್ಲಿ ಗಬ್ಬೂರ ಬೈಪಾಸ್ ಗೆ ತೆರಳಿ ಪುಣೆ ಬೆಂಗಳೂರು ರಾಷ್ಟ್ರಿಯ ಹೆದ್ದಾರಿ ಸಂಚಾರವನ್ನು ಸ್ಥಗಿತಗೊಳಿಸಲಾಗುವುದು ಸೇರಿದಂತೆ ವಿವಿಧ ರೀತಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಈ ಹೋರಾಟದ ಸಂದರ್ಭದಲ್ಲಿ ಕಳಸಾ ಬಂಡೂರಿ ಯೋಜನೆಯಲ್ಲಿನ ಕಾಮಗಾರಿ ಕುರಿತು ಹೋರಾಟದಲ್ಲಿ ಗಮನ ಸೆಳೆಯುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು ಎಂದರು.
ಈ ಸಂದರ್ಭದಲ್ಲಿ ಬಾಬಾಜಾನ ಮುಧೋಳ, ಶಿವು ಅರಕೇರಿ, ಪೀರಜಾದೆ, ಲಕ್ಷ್ಮಣ, ರೇಣುಕಾ ಪೆÇಂಗಲ್ ಸೇರಿದಂತೆ ಆಟೋ, ಲಾರಿ, ಮಾಲೀಕರ ಸಂಘ ಕನ್ನಡ ಪರ ಸಂಘಟನೆಗಳು ದಲಿತ ರೈತ ಪರ ಸಂಘಟನೆಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.