ನಾಳೆಯಿಂದ ಕಾಲೇಜು ಆರಂಭ: ಸಕಲ ಸಿದ್ದತೆ

ಬೆಂಗಳೂರು, ನ.16- ಕೊರೋನಾ ಸೋಂಕು ಕಾಣಿಸಿಕೊಂಡ‌ ಐದಾರು ತಿಂಗಳ ಬಳಿಕ ಇಂಜಿನಿಯರಿಂಗ್, ಪದವಿ ಮತ್ತು ಡಿಪ್ಲೊಮಾ ಕಾಲೇಜು ತರಗತಿ ನಾಳೆಯಿಂದ ಆರಂಭವಾಗಲಿದ್ದು ಇದಕ್ಕಾಗಿ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ‌.

ಸೋಂಕು ಕಾಣಿಸಿಕೊಂಡ ನಂತರ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ಹಲವು ಸುತ್ತಿನ ಸುದೀರ್ಘ ಮಾತುಕತೆ ನಡೆಸಿ ಅಂತಿಮವಾಗಿ ನಾಳೆಯಿಂದ ಕಾಲೇಜು ಆರಂಭವಾಗುತ್ತದೆ.ಕಾಲೇಜು ನಾಳೆಯಿಂದ ಆರಂಭವಾದರೂ ವಿದ್ಯಾರ್ಥಿಗಳು ಕಾಲೇಜಿಗೆ ಬರುವುದನ್ನು ಅವರ ವಿವೇಚನೆಗೆ ಬಿಡಲಾಗಿದೆ. ಕಾಲೇಜಿಗೆ ಆಗಮಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಪೋಷಕರಿಂದ ಒಪ್ಪಿಗೆ ಪತ್ರ ತರುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಕಾಲೇಜಿಗೆ ಬರಲು ಇನ್ನೂ ಹಿಂದೇಟು ಹಾಕುತ್ತಿರುವ ವಿದ್ಯಾರ್ಥಿಗಳಿಗಾಗಿ ಆನ್ಲೈನ್ ತರಗತಿಗಳನ್ನು ನಡೆಸಲು ಸರ್ಕಾರ ಈಗಾಗಲೇ ಸೂಚನೆ ನೀಡಿದೆ ತರಗತಿಗಳಲ್ಲಿ ಕಾಲೇಜು ಮತ್ತು ಆನ್ ಲೇನ್ ತರಗತಿಗಳು ಮುಂದುವರೆಯಲಿವೆ. ಇಂಜಿನಿಯರಿಂಗ್, ಪದವಿ ಮತ್ತು ಡಿಪ್ಲೋಮಾ ಕಾಲೇಜಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆಯೂ ಆಯಾ ಕಾಲೇಜುಗಳಿಗೆ ರಾಜ್ಯ ಸರ್ಕಾರ ಈಗಾಗಲೇ ಸೂಚನೆ ನೀಡಿದೆ.

ಅಗತ್ಯ ಕ್ರಮ:
ನಾಳೆಯಿಂದ ಕಾಲೇಜುಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವುದೇ ಅವಗಡಗಳಿಗೆ ಮತ್ತು ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡುವಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.ಹಾಸ್ಟೆಲ್ ನಲ್ಲಿ ಉಳಿದುಕೊಳ್ಳುವ ವಿದ್ಯಾರ್ಥಿಗಳಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ.

ವಿರೋಧದ ನಡುವೆ ಆರಂಭ:

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಲಾ-ಕಾಲೇಜುಗಳನ್ನು ಆರಂಭ ಮಾಡಬಾರದು ಎಂದು ವಿರೋಧ ಪಕ್ಷಗಳು ಸರ್ಕಾರದ ಮೇಲೆ ಒತ್ತಡ ಹೇರಿದ್ದರು ಅದನ್ನು ಲೆಕ್ಕಿಸದೆ ರಾಜ್ಯ ಸರ್ಕಾರ ಕಾಲೇಜುಗಳನ್ನು ನಾಳೆಯಿಂದ ಆರಂಭ ಮಾಡುತ್ತಿದೆ. ಕಾಲೇಜುಗಳು ನಾಳೆಯಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಸ್ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ

ಎಲ್ಲಾ ತಯಾರಿ:‌ಡಿಸಿಎಂ

ನಾಳೆಯಿಂದ ಕಾಲೇಜು ಆರಂಭಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಕಾಲೇಜುಗಳಲ್ಲಿ ಸ್ಯಾನಿಟೈಸ್ ಕೂಡ ಮಾಡಲಾಗುತ್ತಿದೆ. ಕೊರತೆಗಳ ನಡುವೆ ಅಂತರ ಕಾಪಾಡಿಕೊಳ್ಳುವಂತೆ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರು ಆಗಿರುವ ಉಪಮುಖ್ಯಮಂತ್ರಿ ಡಾ. ಸಿ ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಸ್ವಯಿಚ್ಛೆಯಿಂದ ಕಾಲೇಜಿಗೆ ಬರಬೇಕು ಕಾಲೇಜಿಗೆ ಬರುವ ಎಲ್ಲ ವಿದ್ಯಾರ್ಥಿಗಳಿಗೆ ಸರ್ಕಾರವೇ ತನ್ನ ಹಣದಲ್ಲಿ ಪರೀಕ್ಷೆ ಮಾಡಲಿದೆ. ಬಾರಿ ಕಾಲೇಜುಗಳ ಪಠ್ಯಕ್ರಮವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡುವುದಿಲ್ಲ ಈಗಾಗಲೇ ಆನ್ಲೈನ್ನಲ್ಲಿ ತರಗತಿಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಎಂದಿನಂತೆ ಪಠ್ಯಕ್ರಮ ಇರಲಿದೆ ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳಿಗೆ ರೋಗಲಕ್ಷಣ ವಿದ್ದರೆ ಮಾತ್ರ ಕೊರೋನಾ ಪರೀಕ್ಷೆ ಮಾಡಲಾಗುವುದು ಇಲ್ಲದಿದ್ದರೆ ಯಾವುದೇ ಕಾರಣಕ್ಕೂ ಪರೀಕ್ಷೆ ಮಾಡುವುದಿಲ್ಲ. ನೆಗೆಟಿವ್ ಬಂದರೆ ಮಾತ್ರ ಕಾಲೇಜು ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗುವುದು ಇಲ್ಲದಿದ್ದರೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು

ಹಾಸ್ಟೆಲ್ಗಳಲ್ಲಿ ಕೂಡ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ವಿದ್ಯಾರ್ಥಿಗಳು ಯಾವುದೇ ಭಯ ಆತಂಕ ಬೇಡ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳಲ್ಲಿ ಗೊಂದಲ:

ನಾಳೆಯಿಂದ ಪದವಿ ಡಿಪ್ಲೊಮಾ ಮತ್ತು ಇಂಜಿನಿಯರಿಂಗ್ ಕಾಲೇಜುಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಅವರ ಊರಿನಲ್ಲಿರುವ ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿ ಉಳಿದುಕೊಳ್ಳಲು ಸರ್ಕಾರ ವ್ಯವಸ್ಥೆ ಮಾಡಿದೆ ಆದರೆ ಹಾಸ್ಟೆಲ್ ಆರಂಭವಾಗದಿದ್ದರೆ ಎಲ್ಲಿ ಉಳಿದುಕೊಳ್ಳುವುದು ಎನ್ನುವ ಗೊಂದಲ ವಿದ್ಯಾರ್ಥಿಗಳಲ್ಲಿ ಮನೆ ಮಾಡಿದೆ