ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಬಿಗಿಭದ್ರತೆ
ಬೆಂಗಳೂರು, ಮಾ.೮- ಭವಿಷ್ಯದ ಬಾಗಿಲೆಂದೇ ಬಿಂಬಿಸಲಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯಾದ್ಯಂತ ನಾಳೆಯಿಂದ ಆರಂಭವಾಗಲಿದೆ. ಈ ವಾರ್ಷಿಕ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿವೂ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸುಮಾರು ೭.೨೭ ಲಕ್ಷ ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಾರ್ಚ್ ೨೯ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.ರಾಜ್ಯದ ೫,೭೧೬ ಕಾಲೇಜುಗಳಿಂದ ೭.೨೭ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಸಜ್ಜಾಗಿದ್ದಾರೆ. ರಾಜ್ಯದಲ್ಲಿ ೧,೧೦೯ ಪರೀಕ್ಷಾ ಕೇಂದ್ರಗಳನ್ನ ಗುರುತಿಸಲಾಗಿದೆ. ಅಲ್ಲದೆ, . ಕಲಾ ವಿಭಾಗದಿಂದ ೨,೩೪,೮೧೫, ವಾಣಿಜ್ಯದಲ್ಲಿ ೨,೪೭,೨೬೯ ಮತ್ತು ವಿಜ್ಞಾನ ವಿಭಾಗದಿಂದ ೨,೪೪,೧೨೯ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಯಾವುದೇ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಲಾಗಿದ್ದು, ಊಹಾಪೋಹ, ವದಂತಿಗಳಿಗೆ ಕಿವಿಗೊಡದಂತೆ ಶಿಕ್ಷಣ ಇಲಾಖೆ ಮನವಿ ಮಾಡಿದೆ.
ಪ್ರತಿ ವರ್ಷ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ (ಪಿಯು ಬೋರ್ಡ್) ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸಲಾಗುತ್ತಿತ್ತು. ಈ ವರ್ಷ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಎಸೆಸೆಲ್ಸಿ ಬೋರ್ಡ್) ಹಾಗೂ ಪಿಯು ಬೋರ್ಡ್ ವಿಲೀನ ಮಾಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯನ್ನು ರಚಿಸಿದೆ. ಈ ಮಂಡಳಿಯಡಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಈಗಾಗಲೇ ಮಂಡಳಿಯ ಸೂಚನೆಯಂತೆ ಆಯಾ ಜಿಲ್ಲಾ ಉಪನಿರ್ದೇಶಕ ಮಾರ್ಗದರ್ಶನದಲ್ಲಿ ಪರೀಕ್ಷೆಗೆ ಆಗಬೇಕಿರುವ ಎಲ್ಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.
ಸಿಸಿಟಿವಿ ಕಣ್ಗಾವಲು: ನಕಲು ಅಥವಾ ಪರೀಕ್ಷ ಅಕ್ರಮ ಪೂರ್ಣ ಪ್ರಮಾಣದಲ್ಲಿ ತಡೆಯುವ ನಿಟ್ಟಿನಲ್ಲಿ ಎಲ್ಲ ಪರೀಕ್ಷ ಕೇಂದ್ರದಲ್ಲೂ ಸಿಸಿಟಿವಿ ಅಳವಡಿಸಲಾಗಿದೆ. ವಿದ್ಯಾರ್ಥಿ ಗಳಿಗೆ ಹಾಗೂ ಕೊಠಡಿ ಮೇಲ್ವಿ ಚಾರಕರಿಗೆ, ವಿಚಕ್ಷಣ ದಳದ ಅಧಿಕಾರಿ, ಸಿಬಂದಿಗೆ ಪ್ರತ್ಯೇಕ ಮಾರ್ಗ ಸೂಚಿಯನ್ನು ಹೊರಡಿಸಲಾಗಿದೆ. ಮೊಬೈಲ್ ಸಹಿತ ಎಲೆಕ್ಟ್ರಾನಿಕ್ಸ್ ಪರಿಕರಗಳನ್ನು ಪೂರ್ಣ ಪ್ರಮಾಣದಲ್ಲಿ ನಿಷೇಧಿಸಲಾಗಿದೆ.
ಪರೀಕ್ಷೆಯ ಸುರಕ್ಷತೆ ಹಾಗೂ ಭದ್ರತೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಮಟ್ಟದಲ್ಲಿ ಒಂದು ತಂಡ, ತಾಲೂಕು ಮಟ್ಟದಲ್ಲಿ ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ. ಪ್ರಶ್ನೆ ಪತ್ರಿಕೆ ವಿತರಣೆ ತಂಡಗಳಿಗೆ ಮಾರ್ಗವನ್ನು ಗುರುತಿಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತ ರೀತಿಯಲ್ಲಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ನಕಲು ತಡೆಗೆ ಜಾಗೃತದಳ ನೇಮಕ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳ ಬಳಿ ಸಿಸಿಟಿವಿ ಅಳವಡಿಸಲಾಗಿದೆ. ಪರೀಕ್ಷೆ ನಡೆಯುವ ಕೇಂದ್ರಗಳ ಬಳಿಯಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಸೂಚನೆ ನೀಡಲಾಗಿದೆ.

ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಎಸ್‌ಜಿಆರ್‌ಸಿ ಕಾಲೇಜಿನಲ್ಲಿ ಸಿಬ್ಬಂದಿ ಅಂತಿಮ ಸಿದ್ಧತೆಯಲ್ಲಿ ತೊಡಗಿರುವುದು.

೪,೪೯೨ ವಿದ್ಯಾರ್ಥಿಗಳು ಹೊರಕ್ಕೆ..!

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಹಾಜರಾತಿ ಕೊರತೆಯಿಂದಾಗಿ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗಳಿಂದ ೪,೪೯೨ ವಿದ್ಯಾರ್ಥಿಗಳು ಹೊರಗುಳಿಯಲಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ವರ್ಷದಿಂದ ಶೇಕಡಾ ೭೫ ರಷ್ಟು ಕಡ್ಡಾಯ ಹಾಜರಾತಿ ನಿಯಮವನ್ನು ಮರಳಿ ತಂದಿದೆ. ಹೀಗಾಗಿ, ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗೆ ೪,೪೯೨ ವಿದ್ಯಾರ್ಥಿಗಳು ಗೈರಾಗಲಿದ್ದಾರೆ.

ಪರೀಕ್ಷೆಗೆ ಉಚಿತ ಪಯಾಣ..!
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಾ.೯ರಿಂದ ೨೯ರ ವರೆಗೆ ನಡೆಯಲಿರುವ ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಬಿಎಂಟಿಸಿ ಸಂಸ್ಥೆ ತಿಳಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ ದಿನಾಂಕ ಮಾ.೯ರಿಂದ ಮಾ.೨೯ರ ವರೆಗೆ ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದ ವರೆಗೆ ಮತ್ತು ಹಿಂದುರುಗುವಾಗ ’ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರ’ವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಭದ್ರತಾ ಕ್ರಮಗಳೇನು?

ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

    ಈ ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಗಳು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ
    ಶಂಕಿತ ವ್ಯಕ್ತಿಗಳ ಮೇಲೆ ವಿಶೇಷ ನಿಗಾ
    ಹಿಂದಿನ ವ?ಗಳಲ್ಲಿ ಪರೀಕ್ಷಾ ಅಕ್ರಮ ವರದಿಯಾಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ನಿಗಾ
    ಮೊಬೈಲ್ ಫೋನ್, ಸ್ಮಾರ್ಟ್‌ವಾಚ್, ಇಯರ್‌ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳ ನಿ?ಧ
    ವಿದ್ಯಾರ್ಥಿಗಳು ಸಮಯ ನೋಡಿಕೊಳ್ಳಲು ಗೋಡೆ ಗಡಿಯಾರದ ವ್ಯವಸ್ಥೆ
    ವದಂತಿಗಳನ್ನು ಹಬ್ಬಿಸುವ ಕಿಡಿಗೇಡಿಗಳ ಮೇಲೆ ಸೈಬರ್ ಅಧಿಕಾರಿಗಳು, ಸ್ಥಳೀಯ ಪೊಲೀಸರು ಹಾಗೂ ಇನ್ನಿತರ ತಂಡಗಳು ವಿಶೇ? ನಿಗಾ
    ಸಿಸಿ ಕ್ಯಾಮೆರಾ ಕಣ್ಗಾವಲು, ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳು ಪರೀಕ್ಷೆ ಅವಧಿಯಲ್ಲಿ ಬಂದ್
    ಸೈಬರ್ ಸೆಂಟರ್, ಟ್ಯೂನ್ ಕೇಂದ್ರಗಳು, ಕಂಪ್ಯೂಟರ್, ಗೇಮ್ಸ್ ಕೇಂದ್ರಗಳ ಮೇಲೆ ವಿಶೇ? ನಿಗಾ