ನಾಳೆಯಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು,ಏ.೧೨:ಮೇ ೧೦ ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಚುನಾವಣೆಯ ಅಧಿಸೂಚನೆ ನಾಳೆ ಪ್ರಕಟವಾಗಲಿದ್ದು, ನಾಳೆಯಿಂದಲೇ ನಾಮಪತ್ರ ಸಲ್ಲಿಕೆ ಮಾಡಬಹುದಾಗಿದೆ.
ಈ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏ. ೨೦ ಕಡೆಯ ದಿನವಾಗಿದ್ದು, ನಾಮಪತ್ರ ಪರಿಶೀಲನೆ ಏ. ೨೧ಕ್ಕೆ ನಡೆಯಲಿದ್ದು, ನಾಮಪತ್ರ ವಾಪಾಸ್ಸಾತಿಗೆ ಏ. ೨೪ ಕೊನೆಯ ದಿನ. ಚುನಾವಣೆಗಳು ಮೇ ೧೦ ರಂದು ನಡೆಯಲಿದ್ದು, ಮತ ಎಣಿಕೆ ಮೇ ೧೩ ರಂದು ನಡೆದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.