ನಾಳೆಯಿಂದ ಸರ್ಕಾರಿ ಕಚೇರಿ ವೇಳೆ ಬದಲಾವಣೆ

ಬಳ್ಳಾರಿ ಏ 11 : ಈ ವರ್ಷದ ಎಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಹೆಚ್ಚಾಗುವ ಬಿಸಿಲಿನ ತಾಪಮಾನದ ಹಿನ್ನಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಮತ್ತು ಕಲ್ಬುರ್ಗಿ ಜಿಲ್ಲೆಯ ಏಳು ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ಕಲ್ಬುರ್ಗಿ, ಬೀದರ್, ಯಾದಗಿರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ನಾಳೆ ಎ.12. ರಿಂದ ರಾಜ್ಯ ಸರ್ಕಾರಿ ಕಛೇರಿ ಕೆಲಸದ ಸಮಯವನ್ನು ಬೆಳಿಗೆ 8 ಗಂಟೆಯಿಂದ ಮಧ್ಯಾಹ್ನ 1-30 ರ ವರೆಗೆ ಬದಲಾವಣೆ ಮಾಡಿದೆ.

ಈ ಜಿಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಕಛೇರಿ ಸಮಯದಲ್ಲಿ ತಮ್ಮ ಕರ್ತವ್ಯಗಳನ್ನು ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ನಿರ್ವಹಿಸತಕ್ಕದ್ದು.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಕೆಲಸ ನಿರ್ವಹಿಸಲು ಸೂಚಿಸಿದ ಸಂದರ್ಭದಲ್ಲಿ ವಿಶೇಷವಾಗಿ ಕೋವಿಡ್-19 ಕಛೇರಿ ಸಮಯ ಬದಲಾವಣೆ ಅನ್ವಯಿಸುವುದಿಲ್ಲ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಎಸ್.ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
ಎಪ್ರಿಲ್ ಒಂದರಿಂದಲೇ ಈ ಆದೇಶ ಜಾರಿಗೆ ಬರಬೇಕಿತ್ತು. ಆದರೆ 12 ದಿನ‌ ತಡವಾಗಿ ಬಂದಿದೆ.