ನಾಳೆ ಅ.ಕ.ರ.ಸಾ.ನೌ. ಮಹಾ ಸಮ್ಮೇಳನ

ಹುಬ್ಬಳ್ಳಿ,ಜು14 : ಕರ್ನಾಟಕ ರಾಜ್ಯ ಸಾರಿಗೆ ನೌಕರರ ಸಮಸ್ಯೆಗಳ ಪರಿಹಾರಕ್ಕಾಗಿ ನಾಳೆ ದಾವಣಗೆರೆಯ ತ್ರಿಶೂಲ ಕಲಾಭವನದಲ್ಲಿ ಬೆ. 11 ಗಂಟೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ವತಿಯಿಂದ ಅಖಿಲ ಕರ್ನಾಟಕ ರಸ್ತೆ ಸಾರಿಗೆ ನೌಕರರ ಮಹಾ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಿ.ಎಚ್.ನೀರಲಕೆರಿ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಸ್ಯೆಗಳ ಪರಿಹಾರಕ್ಕಾಗಿ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲ ನೌಕರರಸ್ಥರು ಭಾಗವಹಿಸಬೇಕೆಂದು ಮನವಿ ಮಾಡಿದ ಅವರು, ಅಂದಿನ ಸಮಾವೇಶಕ್ಕೆ ಸಾರಿಗೆ ಸಚಿವರು, ನಾಲ್ಕು ನಿಗಮಗಳ ಎಂಡಿಗಳು ಆಗಮಿಸಲಿದ್ದಾರೆ ಎಂದರು.
ಈ ಹಿಂದೆ ಸಾರಿಗೆ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಹೋರಾಟ ನಡೆಸಲಾಗಿತ್ತು, ಆದರೆ 14000 ನೌಕರರ ಸಮಸ್ಯೆಗಳು ಇನ್ನೂ ಪರಿಹಾರವಾಗಿಲ್ಲ ಎಂದರು. ಹೋರಾಟದಲ್ಲಿ ಭಾಗಿಯಾಗಿದ್ದವರಿಗೆ ವಜಾ ಮಾಡಲಾಗಿತ್ತು. ಅಷ್ಟೇ ಅಲ್ಲದೇ ಹೋರಾಟದ ರೂಪುರೇಷೆಯಾಗಿದ್ದ 6 ನೇ ವೇತನ ಆಯೋಗ ಕುರಿತು ಇನ್ನೂ ಸರ್ಕಾರದ ನಿಲುವು ಸ್ಪಷ್ಟವಾಗಿಲ್ಲ. ಅದನ್ನು ನಿರ್ಣಯಿಸಬೇಕು ಎಂದ ಅವರು ಸರಿಯಾದ ದುಡಿಮೆ ಸರಿಯಾದ ಸಂಬಳ ನೀಡುವ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಸಾರಿಗೆ ನೌಕರರ ಸಮಸ್ಯೆ ಪರಿಹಾರಕ್ಕೆ ಕುರಿತಂತೆ ಈ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸಮಾವೇಶದಲ್ಲಿ ಕಾನೂನು ಬದ್ಧವಾಗಿ ತಾರ್ಕಿಕವಾಗಿ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದರು.
ಸಮಾವೇಶದಲ್ಲಿ 15 ಸಾವಿರಕ್ಕೂ ಹೆಚ್ಚು ನೌಕರರು ಆಗಮಿಸಲಿದ್ದಾರೆ ಎಂದು ಅವರು ಹೇಳಿದರು.