ನಾಳೆ ಆರೂಢ ದಾಸೋಹಿ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ

ದಾವಣಗೆರೆ. ಜು.೨೮; ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಾಗನೂರು ಬಸಪ್ಪ ಪ್ರತಿಷ್ಠಾನದ ವತಿಯಿಂದ ನಾಳೆ ಬೆಳಗ್ಗೆ  ೧೧ ಕ್ಕೆ ನಗರದ ಕುವೆಂಪು ಕನ್ನಡಭವನದಲ್ಲಿ
ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷರಾದ ಬಿ.ವಾಮದೇವಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಕಾರ್ಯಕ್ರಮದ ಸಾನಿಧ್ಯ ವಹಿಸಲಿರುವ ಗದಗತೋಂಟದಾರ್ಯ ಮಠದ ಶ್ರೀ ಡಾ.ತೋಂಟದ ಸಿದ್ದರಾಮ ಸ್ವಾಮೀಜಿಯವರಿಗೆ ಈ ಬಾರಿ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.ಸಮಾರಂಭದ ಅಧ್ಯಕ್ಷತೆಯನ್ನು ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನದ ಅಧ್ಯಕ್ಷರಾದ
ಎಂ.ಬಿ. ಸಂಗಮೇಶ್ವರ ಗೌಡರು ವಹಿಸಿಕೊಳ್ಳಲಿದ್ದಾರೆ.ಕಸಾಪ‌ ರಾಜ್ಯಾಧ್ಯಕ್ಷನಾಡೋಜ ಡಾ. ಮಹೇಶ್ ಜೋಷಿಉದ್ಘಾಟನೆ ನೆರವೇರಿಸಲಿದ್ದಾರೆ.ಪ್ರಶಸ್ತಿ ಪ್ರದಾನವನ್ನು ಮಾಜಿ ಸಚಿವರಾದ  ಎಸ್.ಎಸ್‌. ಪಾಟೀಲ್ ಮಾಡಲಿದ್ದಾರೆ ನಂತರ  ಅಭಿನಂದನಾ ನುಡಿಗಳನ್ನಾಡಲಿದ್ದಾರೆ.ಮುಖ್ಯ ಅತಿಥಿಗಳಾಗಿ‌ ದಾವಣಗೆರೆ ವಿವಿ ಕುಲಪತಿ ಪ್ರೊ.ಬಸವರಾಜ ಡಿ ಕುಂಬಾರ್,ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಡಾ.ಹೆಚ್.ಎಸ್ ಮಂಜುನಾಥ್ ‌ಕುರ್ಕಿ ಆಗಮಿಸಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ ಎಂದರು. ೨೦೧೪ ರಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬರಲಾಗಿದೆ.ಪ್ರಶಸ್ತಿಯು ಐವತ್ತು ಸಾವಿರ ನಗದು ಹಾಗೂ ಫಲಕ ಹೊಂದಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಕಸಾಪ ಗೌರವ ಕಾರ್ಯದರ್ಶಿ ಬಿ.ದಿಳ್ಯಪ್ಪ,ರೇವಣಸಿದ್ದಪ್ಪ ಅಂಗಡಿ,ಎಸ್ ಆರ್ ಶಿರಗುಂಬಿ ಉಪಸ್ಥಿತರಿದ್ದರು.

Attachments area