ನಾಳೆ ಕಂಪ್ಲಿ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಕಂಪ್ಲಿ, ನ.5: ನ.6ರ ಶುಕ್ರವಾರದಂದು ಕಂಪ್ಲಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಚುನಾವಣೆ ಜರುಗಲಿದ್ದು ತೀವ್ರ ಕುತೂಹಲ ಕೆರಳಿಸಿದೆ. ಸ್ಥಳೀಯ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ (ಎ) ಮೀಸಲು ನಿಗದಿಪಡಿಸಿದೆ. ಒಟ್ಟು 23 ಸದಸ್ಯ ಬಲದಲ್ಲಿ ಬಿಜೆಪಿ 13 ಮತ್ತು ಕಾಂಗ್ರೆಸ್ 10 ಸದಸ್ಯರನ್ನು ಹೊಂದಿದ್ದು, ಬಿಜೆಪಿಗೇನೆ ಪುರಸಭೆ ಅಧಿಕಾರ ಚುಕ್ಕಾಣಿ ಲಭಿಸುವುದು ಖಾತ್ರಿಯಾಗಿದೆ. ತಹಸೀಲ್ದಾರ್ ಗೌಸಿಯಾಬೇಗಂ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಚುನಾವಣೆಗೆ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದು, ಚುನಾವಣೆಗೆ ಅವಶ್ಯವಿರುವ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.