ನಾಳೆ ಕಂಪ್ಲಿ ಸೇರಿ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಕಂಪ್ಲಿ, ಅ.28: ಕಂಪ್ಲಿಯ 11ಕೆವಿ/33ಕೆ.ವಿ ವಿದ್ಯುತ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಇರುವ ಹಿನ್ನೆಲೆ ಪಟ್ಟಣ ಸೇರಿದಂತೆ ನಂ.10 ಮುದ್ದಾಪುರ, ರಾಮಸಾಗರ, ಸಣಾಪುರ, ದೇವಸಮುದ್ರ ಹಾಗೂ ಹಂಪಾದೇವನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅ.29ರ ಗುರುವಾರದಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಕಂಪ್ಲಿ ಜೆಸ್ಕಾಂ ಜೆಇ ಶ್ರೀನಿವಾಸ್‍ರಾಜ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.