
ಮಾನ್ವಿ,ಏ.೦೮- ಕಳೆದ ತಿಂಗಳಿನಲ್ಲಿ ಲಿಂಗೈಕ್ಯರಾದ ಕಲ್ಮಠದ ಷ.ಬ್ರ.ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ಎಲ್ಲ ಶಿಕ್ಷಣ ಪ್ರೇಮಿಗಳು, ಬುದ್ಧಿಜೀವಿಗಳು, ಯುವಕರು, ಯುವತಿಯರು, ವಿದ್ಯಾರ್ಥಿಗಳು, ಮಠದ ಭಕ್ತಾದಿಗಳು ಕಾರ್ಯಕ್ರಮಕ್ಕೆ ಆಗಮಿಸುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಚ್. ಶರ್ಪುದ್ದೀನ್ ಹೇಳಿದರು.
ಪಟ್ಟಣದ ಕಾಳಿಂಗ ಕಾಲೇಜಿನಲ್ಲಿ ಏ.೦೯ ಭಾನುವಾರದಂದು ಮುಂಜಾನೆ ೧೦:೩೦ ಕ್ಕೆ ದಿವಂಗತ ಶ್ರೀಗಳ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಹಿರಿಯ ಸಾಹಿತಿ ರಮೇಶಬಾಬು ಯಾಳಗಿಯವರು ಶ್ರೀಗಳ ಕುರಿತು ವಿಶೇಷ ಉಪನ್ಯಾಸ ಮಾಡಲಿದ್ದು ಈ ಕಾರ್ಯಕ್ರಮದಲ್ಲಿ ಕಲ್ಮಠದ ವಿರೂಪಾಕ್ಷಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಬ್ರಹನ್ ಮಠದ ರೇಣುಕಾ ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.