ನಾಳೆ ಕಲ್ಯಾಣ ಕ್ರಾಂತಿ ವಿಜಯೋತ್ಸವ ಹಾಗೂ ಸನ್ಮಾನ ಸಮಾರಂಭ

ಸಂಜೆವಾಣಿ ವಾರ್ತೆ

ಹಿರಿಯೂರು : ನ.27- ನಾಳೆ ಐಮಂಗಲದಲ್ಲಿ ಶ್ರೀ ಮಹಾ ಶಿವಶರಣ ಹರಳಯ್ಯ ಗುರು ಪೀಠದಿಂದ 12ನೇ ಶತಮಾನದ ಶರಣರ ಕಲ್ಯಾಣ ಕ್ರಾಂತಿ ವಿಜಯೋತ್ಸವ ಕಾರ್ಯಕ್ರಮ ಹಾಗೂ ಮಹಾಶಿವ ಶರಣಯ್ಯ ಚಲನ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ  ಮತ್ತು ಮಹಾಶಿವಶರಣ ಪ್ರಶಸ್ತಿ ಪ್ರಧಾನ ಸಮಾರಂಭ ಅಂತರ್ಜಾತಿ ವಿವಾಹದ ಆದರ್ಶ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸಾಣೆ ಹಳ್ಳಿ ಶಿವ ಸಂಚಾರ ಕಲಾತಂಡ ಮತ್ತು ಇತರೆ ಕಲಾತಂಡದ ವತಿಯಿಂದ ಮೂರು ದಿನಗಳ ಕಾಲ ನಾಟಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ  ಸುತ್ತಮುತ್ತಲಿನ ಭಕ್ತಾದಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಶ್ರೀ ಮಹಾ ಶಿವಶರಣ ಹರಳಯ್ಯ ಗುರು ಪೀಠದ ಶ್ರೀ ಬಸವ ಹರಳಯ್ಯ ಸ್ವಾಮೀಜಿಯವರು ಕೋರಿದ್ದಾರೆ.  ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ್ ಸಹಕಾರ ಸಚಿವರಾದ  ಹೆಚ್ ಸಿ ಮಹಾದೇವಪ್ಪ ಆಹಾರ ಸಚಿವರಾದ ಕೆ.ಎಚ್ ಮುನಿಯಪ್ಪ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾದ ಜಿ.ಎಸ್ ಮಂಜುನಾಥ್ ಹಾಗೂ  ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು  ಹಾಗೂ ವಿವಿಧ ಮಠಗಳ ಸ್ವಾಮೀಜಿಗಳು ಆಗಮಿಸಲಿದ್ದಾರೆ. ಪ್ರಯುಕ್ತ ಮಾದಿಗ ಸಮುದಾಯದ ಎಲ್ಲ ಭಕ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ಶ್ರೀ ಹರಳಯ್ಯ ಗುರು ಪೀಠದ ಶ್ರೀ ಬಸವ ಹರಳಯ್ಯ ಸ್ವಾಮೀಜಿಯವರು ಮನವಿ ಮಾಡಿದರು.  ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಎಸ್ ಎಸ್ ಸೆಲ್ ಅಧ್ಯಕ್ಷರಾದ ಜಿ ಎಲ್ ಮೂರ್ತಿ ಮುಖಂಡರಾದ ಬೋರನಕುಂಟೆ ಜೀವೇಶ್ ಕೃಷ್ಣಮೂರ್ತಿ ಕೃಷ್ಣಾಪುರ ರಘುನಾಥ್ ನಾಗರಾಜ್ ಮಂಜುನಾಥ್ ಪ್ರದೀಪ್ ಕೆ ಆರ್ ಹಳ್ಳಿ ಗಿರೀಶ್ ನಂದಕುಮಾರ್ ಕಲ್ಲಟ್ಟಿ ಹರೀಶ್ ಇನ್ನು ಹಲವಾರು ಮುಖಂಡರು ಉಪಸ್ಥಿತರಿದ್ದರು.