ನಾಳೆ ಕಾಂಗ್ರೆಸ್ ಪ್ರತಿಭಟನೆ

ಕಲಬುರಗಿ:ನ.10:ಮಾಜಿ ಮುಖ್ಯಮಂತ್ರಿಗಳು ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ದಲಿತ ವಿರೋಧಿ ಎಂದು ಬಿಜೆಪಿ ಯವರು ಸುಳ್ಳು ಹೇಳುತ್ತಾ ಅಪಪ್ರಚಾರ ಮಾಡುತ್ತಿರುವದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಭಾಗಗಳ ವತಿಯಿಂದ ನ.11 ರಂದು ಬೆಳಿಗ್ಗೆ 11-00 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನೆಯ ಮೂಲಕ ತೆರಳಿ ಜಿಲ್ಲಾಧಿಕಾರಿಗಳ ಕಚೇರಿ ಎದುರಿಗೆ ಕಲಬುರಗಿ ಜಿಲ್ಲೆಯ ಬಿಜೆಪಿ ಕೆಲವು ಶಾಸಕರುಗಳ ಪ್ರತಿಕೃತಿಯನ್ನು ದಹನ ಮಾಡಲಾಗುವದು.
ಪ್ರಯುಕ್ತ ಈ ಬೃಹತ್ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಚುನಾಯಿತ ಪ್ರತಿನಿಧಿಗಳು, ಮಹಿಳೆಯರು, ಯುವಕರು, ಪಕ್ಷದ ಅಭಿಮಾನಿಗಳು ಹೆಚ್ಚು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ತಿಳಿಸಿದ್ದಾರೆ.