ನಾಳೆ ಕಾಚಿನಕಟ್ಟೆ ಪ್ರೌಢಶಾಲೆ ರಜತ ಮಹೋತ್ಸವ

ಇದು ಸರಕಾರಿ ಪ್ರೌಢಶಾಲೆಯಾದರೂ ಸೌಲಭ್ಯ ಮತ್ತು ಗುಣಮಟ್ಟದ ಶಿಕ್ಷಣದಲ್ಲಿ ಯಾವುದೇ ಖಾಸಗಿ ಶಾಲೆಗಳಿಗೇನು ಕಡಿಮೆ ಇಲ್ಲ. ಸರಕಾರಿ ಶಾಲೆಗಳಿಗೆ ಮಕ್ಕಳೇ ಬರುವುದಿಲ್ಲ ಎಂಬ ದೂರುಗಳೇ ಕೇಳಿ ಬರುವಾಗ ಈ ಶಾಲೆಯಲ್ಲಿ 150ಕ್ಕಿಂತ ಅಕ ವಿದ್ಯಾರ್ಥಿಗಳಿದ್ದಾರೆ.ಇದು ಶಿವಮೊಗ್ಗ ತಾಲೂಕು ಕರ‍್ಲಹಳ್ಳಿ- ಕಾಚಿನಕಟ್ಟೆಯ ನೇತಾಜಿ ಸುಭಾಷ್‌ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆ. ಗುಣಮಟ್ಟದ ಶಿಕ್ಷಣದಲ್ಲಿ ಜಿಲ್ಲೆಯಲ್ಲೇ ಹೆಸರು ಗಳಿಸಿದ ಈ ಶಾಲೆಗೆ ಈಗ ರಜತ ಮಹೋತ್ಸವದ ಸಂಭ್ರಮ. 1997ರಲ್ಲಿ ಆರಂಭವಾದ ಶಾಲೆಗೆ 25 ಸಂವತ್ಸವರಗಳು ಮುಗಿದ ಹಿನ್ನೆಲೆಯಲ್ಲಿ ಜ.22ರಂದು ಬೆಳಗ್ಗೆ 10ಗಂಟೆಗೆ ರಜತ ಮಹೋತ್ಸವ, ಗುರುವಂದನಾ ಮತ್ತು ಹಳೆ ವಿದ್ಯಾರ್ಥಿಗಳ ಸಮಾಗಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ರಜತ ಮಹೋತ್ಸವ ಅಂಗವಾಗಿ ಶಾಲೆಯಲ್ಲಿ ಇದೂವರೆಗೆ ಸೇವೆ ಸಲ್ಲಿಸಿದ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಗುಮಾಸ್ತರು, ಡಿ ಗ್ರೂಪ್ ನೌಕರರು, ಕಳೆದ 25 ವರ್ಷದಲ್ಲಿ ಪ್ರತಿವರ್ಷ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಳೆ ವಿದ್ಯಾರ್ಥಿಗಳು, ದಾನಿಗಳು ಮತ್ತು ಶಾಲೆ ಅಭಿವೃದ್ಧಿಗೆ ಶ್ರಮಿಸಿದವರನ್ನು ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಅಶೋಕಸ್ತಂಭ ಮಾದರಿಯ ಧ್ವಜ ಸ್ತಂಭ, ಮುಖ್ಯದ್ವಾರ, ಹೆಚ್ಚುವರಿ ಕಟ್ಟಡಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಸಹ ನೆರವೇರಿಸಲಾಗುವುದು. ಮಹೋತ್ಸವಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲೆಯ ಚುನಾಯಿತ ಪ್ರತಿನಿಗಳು, ಗಣ್ಯರು ಭಾಗವಹಿಸುವರು.ಸಂಜೆ ನಡೆಯುವ ಹಳೆ ವಿದ್ಯಾರ್ಥಿಗಳ ಸಮಾಗಮ ಮತ್ತು ವೇದಿಕೆ ಕಾರ್ಯಕ್ರಮದಲ್ಲಿ ಕರ‍್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ತಿçಶಕ್ತಿ ಸಂಘಟನೆಗಳ ಸದಸ್ಯರು, ಸರಕಾರಿ ಪ್ರೌಢಶಾಲೆ ಸೇರಿದಂತೆ ಸುತ್ತಮುತ್ತಲ ಶಾಲೆಗಳ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳನ್ನು ನಡೆಸಿಕೊಡುವರು. ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿಗಳು, ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಲಾಭಿವೃದ್ಧಿ ಸಮಿತಿ ಮತ್ತು ರಜತ ಮಹೋತ್ಸವ ಸಮಿತಿ ಪದಾಕಾರಿಗಳು ಮನವಿ ಮಾಡಿದ್ದಾರೆ.

—————-