ನಾಳೆ ಕುಂದು ಕೊರತೆ ಸಭೆ

ದಾವಣಗೆರೆ ಸೆ.೧೭; ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ಸೆ.೧೮ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಕುಂದು ಕೊರತೆ ಸಭೆ ಕರೆಯಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.