ನಾಳೆ ಕೂಡ್ಲಿಗಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ.


ಸಂಜೆವಾಣಿ ವಾರ್ತೆ
ಕೂಡ್ಲಿಗಿ. ಸೆ.14 :-ಸಂವಿಧಾನ ಪೀಠಿಕೆ ಓದುವ ಮೂಲಕ ನಾಳೆ ಕೂಡ್ಲಿಗಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು  ಆಚರಿಸಲಾಗುವುದು ಎಂದು ಕೂಡ್ಲಿಗಿ    ತಾಲೂಕು ಸಮಾಜ ಕಲ್ಯಾಣ  ಇಲಾಖೆಯ    ಸಹಾಯಕ ನಿರ್ದೇಶಕ ಜಗದೀಶ  ದಿಂಡೂರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಕೂಡ್ಲಿಗಿ ಶಾಸಕ ಡಾ ಶ್ರೀನಿವಾಸ ಎನ್ ಟಿ ಸಂವಿಧಾನ ಪೀಠಿಕೆ ಪ್ರಸ್ತಾವನೆ ಓದಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪಟ್ಟಣದಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲಾಕಾಲೇಜಿನ ಅಂದಾಜು ಎರಡು ಸಾವಿರ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಪರಿಶಿಷ್ಟ ಜಾತಿ, ವರ್ಗ ಹಾಗೂ ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಪಟ್ಟಣ ಪಂಚಾಯತಿ ಸರ್ವ ಸದಸ್ಯರು ಮತ್ತು ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು  ಜಗದೀಶ ದಿಂಡೂರ್ ಪತ್ರಿಕೆ ಮೂಲಕ ಮನವಿ ಮಾಡಿದ್ದಾರೆ.

One attachment • Scanned by Gmail