
ಕೆ.ಆರ್.ನಗರ ಮಾ,02:- ನಮ್ಮ ಭಾರತೀಯ ಜನಾತ ಪಾರ್ಟಿ ವತಿಯಿಂದ ಮಾ,3 ರಂದು ಕೆ.ಆರ್.ನಗರ ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಯಾತ್ರೆಯನ್ನು ಹಮ್ಮಿಕೊಂಡಿದ್ದು ಕ್ಷೇತ್ರದ ಮತದಾರರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿಕೊಡಬೇಕೆಂದು ಕರ್ನಾಟಕ ರಾಜ್ಯ ಕಾಂಪೆÇೀಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಮಹದೇವಯ್ಯ ಮನವಿ ಮಾಡಿದರು.
ಅಂದು ಬೆಳಿಗ್ಗೆ 9:30 ಕ್ಕೆ ಪಟ್ಟಣಕ್ಕೆ ಆಗಮಿಸುವ ಯಾತ್ರೆಯಲ್ಲಿ ಗಣ್ಯರು ಉಪಾಹಾರ ಸೇವಿಸಿದ ನಂತರ ಪ್ರಮುಖರ ಭೇಟಿ, ದೇವಸ್ಥಾನಗಳ ಭೇಟಿ, ಪುತ್ತಳಿಗಳಿಗೆ ಮಾಲಾರ್ಪಣೆ ಮಾಡಿ ನಂತರ ಸುದ್ದಿಗೋಷ್ಠಿ ಮಾಡಿದ ಪಟ್ಟಣದ ಮೈಸೂರು ರಸ್ತೆಯ ಶ್ರೀ ತೋಪಮ್ಮ ತಾಯಿ ದೇವಸ್ಥಾನದಿಂದ ಮೆರವಣಿಗೆ ಹೊರಟು ಬಜಾರ್ ರಸ್ತೆ, ವಾಣಿ ವಿಲಾಸ ರಸ್ತೆ ಮೂಲಕ ಪುರಸಭೆ ವೃತ್ತದ ಬಳಿ ವರೆಗೆ ಒಟ್ಟು ಒಂದುವರೆ ಕಿಮೀ ವಿಜಯ ಸಂಕಲ್ಪ ಯಾತ್ರೆ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.
ಪಟ್ಟಣದ ಪತ್ರಕರ್ತರ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಯಾತ್ರೆಗೆ ಸಚಿವ ಕೆ.ಸಿ.ನಾರಾಯಣಗೌಡ, ಗೋಪಾಲಯ್ಯ, ವಿ,ಸೋಮಣ್ಣ, ಅರಗ ಜ್ಞಾನೇಂದ್ರ, ಶಾಸಕ ಕೆ.ಎಸ್.ಈಶ್ವರಪ್ಪ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇನ್ನೂ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಈ ರೋಡ್ ಶೋ ಗೆ ಕ್ಷೇತ್ರದ ಸುಮಾರು 10 ಸಾವಿರಕ್ಕೂ ಹೆಚ್ಚು ಜನರನ್ನು ಸೇರಿಸಿ ಯಾತ್ರೆಯನ್ನು ಯಶಸ್ವಿಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.
ಪಕ್ಷದ ಸಂಘಟನೆ ಮತ್ತು ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ಯಾತ್ರೆ ಮಾಡುತ್ತಿದ್ದು ಇಲ್ಲಿಯವರೆಗೆ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿಲ್ಲ. ಆದರೆ ಈ ಬಾರಿ ನಮ್ಮ ಅಭ್ಯರ್ಥಿ ಜಯಗಳಿಸಲಿದ್ದು ದಕ್ಷರು, ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರು, ಗೆಲುವು ಸಾಧಿಸುವಂತಹ ಅಭ್ಯರ್ಥಿಯನ್ನು ಪಕ್ಷದ ವರಿಷ್ಠರು ಆಯ್ಕೆ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಅನೇಕ ಮುಖಂಡರು ಕೆಲಸ ಮಾಡುತ್ತಿದ್ದರು ಕೂಡ ಈ ಬಾರಿ ವಿಶೇಷವಾದ ಅಭ್ಯರ್ಥಿಗಳನ್ನು ನಿಲ್ಲಿಸಲಿದೆ ಎಂದು ಹೇಳಿದರು.
ಚಾಮರಾಜನಗರ ಜಿಲ್ಲೆಯಿಂದ ಮೈಸೂರಿಗೆ ವಿಜಯ ಸಂಕಲ್ಪ ಯಾತ್ರೆ ಪ್ರವೇಶಿಸಲಿದ್ದು ಶುಕ್ರವಾರ ಕೆ.ಆರ್.ನಗರ ಮುಗಿಸಿ ಹುಣಸೂರಿಗೆ ತೆರುಳಲ್ಲಿದೆ. ರೋಡ್ ಶೋ ನಿಂದ ಜಿಲ್ಲೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಇದು ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರವಾಗಿದೆ ಎಂದರು.
ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆಶ್ರೀನಿವಾಸಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷೆ ಮಂಗಳಸೋಮಶೇಖರ್, ಜಿಲ್ಲಾ ಉಪಾಧ್ಯಕ್ಷ ಹೊಸಹಳ್ಳಿ ವೆಂಕಟೇಶ್, ಜಿಲ್ಲಾ ಮಾದ್ಯಮ ಪ್ರಮುಖ ಹೆಚ್.ಪಿ.ಗೋಪಾಲ್, ತಾಲೂಕು ಅಧ್ಯಕ್ಷ ಕೆ.ವೈ.ಮಂಜು, ಪ್ರಧಾನ ಕಾರ್ಯದರ್ಶಿಗಳಾದ ಅನಿಲ್‍ಗೌಡ, ಮಾರ್ಕಂಡಯ್ಯ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಪ್ರಭಾಕರ್ ಜೈನ್, ನಗರಾಧ್ಯಕ್ಷ ಚಿರಾಗ್ ಪಟೇಲ್, ಆಶ್ರಯ ಕಮಿಟಿ ಸಮಿತಿ ಸದಸ್ಯ ಕೆ.ಆರ್.ಮಂಜು ಸೇರಿದಂತೆ ಇನ್ನಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.