ನಾಳೆ ಕೆ.ಸಿ.ಕೊಂಡಯ್ಯ ಜನ್ಮದಿನ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಜು.09: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ರಾಜ್ಯಸಭ, ಲೋಕಸಭೆ ಮತ್ತು ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಕೆ.ಸಿ.ಕೊಂಡಯ್ಯ ನವರ 73 ನೇ ಜನ್ಮದಿನವನ್ನು ನಾಳೆ ಆಚರಿಸಲು ಅವರ ಅಭಿಮಾನಿಗಳು ಸಿದ್ದತೆ ಮಾಡಿಕೊಂಡಿದ್ದಾರೆ.
ಕೊಂಡಯ್ಯ ಅವರು ನಾಳೆ ಬೆಳಿಗ್ಗೆ ನಗರದ ದುರ್ಗಮ್ಮ, ಕೋಟೆ ಮಲ್ಲೇಶ್ವರ, ಮಾರ್ಕಾಂಡೇಯ ದೇವಸ್ಥಾನಗಳಿಗೆ ಭೇಟಿನೀಡಿ ಪೂಜೆ ಸಲ್ಲಿಸಲಿದ್ದು ನಂತರ ಮನೆಯ ಬಳಿ ಅಭಿಮಾನಿಗಳನ್ನು ಭೇಟಿ ಮಾಡಲಿದ್ದಾರೆ.
ಸಂಜೆ ಜನ್ಮದಿನದ ವಿಶೇಷ ಕಾರ್ಯಕ್ರಮ ಆಯೋಜಿಸಿದೆ.
ಈ ಮಧ್ಯೆ ಅವರ ಅಭಿಮಾನಿಗಳು ಸರ್ಕಾರಿ ಶಾಲೆಗೆ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸುವ ಕಾರ್ಯಕ್ರಮವನ್ನು ಪಾಲಿಕೆ ಸದಸ್ಯ ಪಿ.ಗಾದೆಪ್ಪ ನೇತೃತ್ವದಲ್ಲಿ ಹಮ್ಮಿಕೊಂಡಿದ್ದಾರೆ.