ನಾಳೆ ಕೇಂದ್ರೀಯ ವಿಶ್ವವಿದ್ಯಾಲಯದ ಘಟಿಕೋತ್ಸವ: ಐವರಿಗೆ ಗೌರವ ಡಾಕ್ಟರೇಟ್

ಕಲಬುರಗಿ:ಸೆ. 21: ಜಿಲ್ಲೆಯ ಆಳಂದ್ ತಾಲ್ಲೂಕಿನ ಕಡಗಂಚಿ ಬಳಿ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಐದನೇ ಘಟಿಕೋತ್ಸವ ಸೆ. 23ರಂದು ಬೆಳಿಗ್ಗೆ 11 ಗಂಟೆಗೆ ವರ್ಚುವಲ್ ಮೋಡ್‍ನಲ್ಲಿ ನಿಗದಿಪಡಿಸಲಾಗಿದೆ ಎಂದು ಕುಲಪತಿ ಪ್ರೊ. ಎಚ್.ಎಂ. ಮಹೇಶ್ವರಯ್ಯ ಅವರು ತಿಳಿಸಿದ್ದಾರೆ.
ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಅಧ್ಯಕ್ಷ ಪ್ರೊ. ಡಿ.ಪಿ. ಸಿಂಗ್ ಅವರು ಮುಖ್ಯ ಅತಿಥಿಗಳಾಗಿದ್ದು, ಆನ್‍ಲೈನ್ ಮೂಲಕ ಘಟಿಕೋತ್ಸವ ಭಾಷಣ ಮಾಡುವರು.
ಜಾನಪದ ಲೇಖಕ ಮತ್ತು ಬರಹಗಾರ ಎಂ.ಜಿ. ಬಿರಾದಾರ್, ಕನ್ನಡದ ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪ, ಕನ್ನಡದ ಕವಿ ಚನ್ನವೀರ್ ಕಣವಿ, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತೆ ಸಾಲುಮರದ ತಿಮ್ಮಕ್ಕ ಮತ್ತು ಬಾಹ್ಯಾಕಾಶ ವಿಜ್ಞಾನಿ ಕೆ. ಶಿವನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ವಿಶ್ವವಿದ್ಯಾಲಯವು 32 ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು, 25 ವಿದ್ಯಾರ್ಥಿಗಳಿಗೆ ಪಿಎಚ್‍ಡಿ ಮತ್ತು ಅರ್ಹ ಅಭ್ಯರ್ಥಿಗಳಿಗೆ ಒಟ್ಟು 665 ಪದವಿಗಳನ್ನು ಆನ್‍ಲೈನ್ ಮೂಲಕ ನೀಡುತ್ತಿದೆ ಎಂದು ಅವರು ಹೇಳಿದ್ದಾರೆ.