ನಾಳೆ ಚಿಂಚೋಳಿಗೆ ಕುಮಾರಸ್ವಾಮಿ

ಕಲಬುರಗಿ,ಸೆ.20-ಮಾಜಿ ಮುಖ್ಯಮಂತ್ರಿ ಹಾಗೂ ಚನ್ನಪಟ್ಟಣ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯ ಅಧ್ಯಕ್ಷರಾದ ಸಿ.ಎಂ.ಇಬ್ರಾಹಿಂ ಅವರು ಸೆ.21 ರಂದು ಚಿಂಚೋಳಿಗೆ ಆಗಮಿಸಲಿದ್ದಾರೆ.
21 ರಂದು ಬೆಳಿಗ್ಗೆ 11.30ಕ್ಕೆ ಚಿಂಚೋಳಿ ಮತಕ್ಷೇತ್ರದಲ್ಲಿ ನಡೆಯಲಿರುವ ಜೆಡಿಎಸ್ ಪಕ್ಷದ ಬೃಹತ್ ಪಾದಯಾತ್ರೆಯಲ್ಲಿ ಕುಮಾರಸ್ವಾಮಿ ಹಾಗೂ ಸಿ.ಎಂ.ಇಬ್ರಾಹಿಂ, ಪಕ್ಷದ ಜಿಲ್ಲಾಧ್ಯಕ್ಷ ಸುರೇಶ ಎಂ.ಮಹಾಗಾಂವಕರ್, ಯುವ ಘಟಕದ ಅಧ್ಯಕ್ಷ ಸಮೀರ್ ಭಾಗವಾನ್ ಅವರು ಭಾಗವಹಿಸಲಿದ್ದಾರೆ.
ಆದ ಕಾರಣ ಪಕ್ಷದ ಜಿಲ್ಲೆಯ ಎಲ್ಲಾ ಮುಖಂಡರು, ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಪಕ್ಷದ ಜಿಲ್ಲಾಧ್ಯಕ್ಷರಾದ ಸುರೇಶ ಎಂ.ಮಹಾಗಾಂವಕರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.