
ಕಲಬುರಗಿ,ಮೇ.26-ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ ನೇಹರು ಪುಣ್ಯ ದಿನವನ್ನು ಮೇ.27 ರಂದು ಬೆಳಿಗ್ಗ 10 ಗಂಟೆಗೆ ಆಚರಿಸಲಾಗುವುದು ಎಂದು ಪಕ್ಷದ ಜಿಲ್ಲಾ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್, ತಾಲೂಕಾ ಪಂಚಾಂiÀiತ್, ಗ್ರಾಮ ಪಂಚಾಯತ್, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾ ನಗರ ಪಾಲಿಕೆಯ ಮಾಜಿ ಪೂಜ್ಯ ಮಹಾಪೌರರು, ಉಪ ಮಹಾಪೌರರು ಹಾಗೂ ಹಾಲಿ ಮತ್ತು ಮಾಜಿ ಸದಸ್ಯರುಗಳು, ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.