
ವಿಜಯಪುರ: ಮಾ.17:ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ, ಫಲಾನುಭವಿ ಆಧಾರಿತ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮಾ.18 ರಂದು ನಗರದ ಸೈನಿಕ ಶಾಲೆ ಮೈದಾನದಲ್ಲಿ ಜಿಲ್ಲಾ ಮಟ್ಟದ ಫಲಾನುಭವಿ ಆಧಾರಿತ ಸಮಾವೇಶದ ಯಶಸ್ವಿಗೆ ಸಕಲ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ನಗರದ ಸೈನಿಕ ಶಾಲೆ ಆವರಣದಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮ್ಮೇಳನವನ್ನು ಅದ್ಧೂರಿಯಾಗಿ, ಅಚ್ಚುಕಟ್ಟಾಗಿ ಆಯೋಜನೆಗೆ ಸಕಲ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಗೊಂದಲಕ್ಕೆ ಎಡೆಮಾಡದೆ, ಎಲ್ಲ ಇಲಾಖಾ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸುವಂತೆ ಸಲಹೆ ನೀಡಿದರು.
ಜಿಲ್ಲೆಯ ಎಲ್ಲಾ ತಾಲೂಕಿನಿಂದ ಬಸ್ಸಿನ ಮೂಲಕ ಕರೆದುಕೊಂಡು ಬರುವ ಫಲಾನುಭವಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು. ಆಯಾ ಫಲಾನುಭವಿಗಳನ್ನು ಪ್ರತ್ಯೇಕ ಬ್ಲಾಕ್‍ಗಳಲ್ಲಿ ವ್ಯವಸ್ಥೆ ಮಾಡಬೇಕು. ಫಲಾನುಭವಿಗಳಿಗೆ ಕರೆದುಕೊಂಡು ಬರುವ ಬಸ್‍ಗಳನ್ನು ಸರ್ಕಾರಿ ಆಸ್ಪತ್ರೆ ಹಿಂಭಾಗದಲ್ಲಿ ಪಾಕಿರ್ಂಗ್ ವ್ಯವಸ್ಥೆ ಕಲ್ಪಿಸಬೇಕು. ಕಾರ್ಯಕ್ರಮ ಆರಂಭಕ್ಕಿಂತ ಮುಂಚಿತವಾಗಿ ಎಲ್ಲ ಯೋಜನೆ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಹಾಜರಿರುವಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸುವಂತೆ ಸೂಚನೆ ನೀಡಿದರು.
ತಾಲೂಕುವಾರು, ಪಂಚಾಯ್ತಿವಾರು ಹೊರಡುವ ಮಾರ್ಗ ನಕ್ಷೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಸಿದ್ಧಪಡಿಸಿಕೊಳ್ಳಬೇಕು. ಬಸ್ಸಿನಲ್ಲಿ ಫಲಾನುಭವಿಗಳಿಗೆ ಕುಡಿಯುವ ನೀರು, ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಬೇಕು.ತಾಲೂಕಾವಾರು ಆಗಮಿಸುವ ಫಲಾನುಭವಿಗಳಿಗೆ ಬಸ್ ಕಾರ್ಯಕ್ರಮಕ್ಕೆ ತೆರಳುವ ಸಮಯ ನಿಗದಿ ಮಾಡಿ ಮಾಹಿತಿ ನೀಡಬೇಕು.
ಫಲಾನುಭವಿಗಳು ಆಯಾ ಸ್ಥಳಗಳಿಂದ ಕರೆದುಕೊಂಡು ಬರುವುದು, ಕಾರ್ಯಕ್ರಮದ ನಂತರ ಮರಳಿ ಕರೆದುಕೊಂಡು ಹೋಗುವ ಕಾರ್ಯದಲ್ಲಿ ತಾಲೂಕಿನ ತಹಶೀಲ್ದಾರ ಹಾಗೂ ತಾಲೂಕಾ ಕಾರ್ಯನಿರ್ವಾಹಕ ಅಧಿಕಾರಿಗಳು ಮುತುವರ್ಜಿಯಿಂದ ಕಾರ್ಯನಿರ್ವಹಿಸಿ, ಯಾವುದೇ, ತೊಂದರೆ, ಗೊಂದಲವಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಭಾಗವಹಿಸುವ ಫಲಾನುಭವಿಗಳಿಗೆ ಅಲ್ಪೋಪಹಾರ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಬೇಕು. ಕೃಷಿ, ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳನ್ನು ಪ್ರಚುರಪಡಿಸಲು ಕಾರ್ಯಕ್ರಮದಲ್ಲಿ ವಸ್ತು ಪ್ರದರ್ಶನ ಮಳಿಗೆ ಏರ್ಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಫಲಾನುಭವಿ ಆಧಾರಿತ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, ಆಯುಷ್ಮಾನ ಭಾರತ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಫಲಾನುಭವಿಗಳಿಗೆ ಹಾಗೂ ಕರ್ನಾಟಕ ಯೋಜನೆ, ಅನ್ನಭಾಗ್ಯ ಯೋಜನೆ, ಸಮಗ್ರ ತೋಟಗಾರಿಕೆ ಅಬಿವೃದ್ದಿ ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿನೀರಾವರಿ), ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ, ರೇಷ್ಮೆ ಇಲಾಖೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಸಿಲ್ಕ್ ಸಮಗ್ರ ಯೋಜನೆ, ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ದಿ ಯೋಜನೆ, ಅಮೃತ ಸ್ವಸಹಾಯ ಕಿರು ಉದ್ದಿಮೆ ಯೋಜನೆ, ಮಾಜಿ ದೇವದಾಸಿ ಮಕ್ಕಳ ವಿವಾಹಕ್ಕೆ ಪೆÇ್ರೀತ್ಸಾಹ ಧನದ ಆದೇಶ ಪತ್ರ, ಕೃಷಿ ಅರಣ್ಯ ಪೆÇ್ರತ್ಸಾಹ ಯೋಜನೆ, ಬೆಳಕು ಯೋಜನೆ, ಸ್ವಯಂ ಉದ್ಯೊಗ ಸಾಲ ಯೋಜನೆ, ಅಟಲ್ ಪೆನ್ಸನ್ ಯೋಜನೆ, ಸಂಧ್ಯಾ ಸುರಕ್ಷಾ ಯೋಜನೆ, ಮೈತ್ರಿ, ಮನಸ್ವಿನಿ, ಅಂಗವಿಕಲ ವೇತನ, ವೃದ್ದಾಪ್ಯ ವೇತನ, ಡೇನಲ್ಮ ಯೋಜನೆ, ವಸತಿ ಯೋಜನೆ ಸೇರಿದಂತೆ ವಿವಿಧ ಯೋಜನೆಯಡಿ ಫಲಾನುಭವಿಗಳಿಗೆ ವೇದಿಕೆ ಮೇಲೆ ಸಾಂಕೇತಿಕವಾಗಿ ಆದೇಶ ಪತ್ರ, ಉಚಿತ ವೈದ್ಯಕೀಯ ಚಿಕಿತ್ಸಾ ಕಾರ್ಡ, ಹೊಸ ಪಡಿತರ ಚೀಟಿ, ಮಂಜೂರಾತಿ ಆದೇಶ ಪತ್ರ, ಪಾಸ್ ಬುಕ್, ಚೆಕ್, ಪೆÇ್ರತ್ಸಾಹ ಧನ ಆದೇಶ ಪತ್ರ, ಸಾಧನ-ಸಲಕರಣೆ, ಹಕ್ಕು ಪತ್ರಗಳನ್ನು ಸಾಂಕೇತಿಕವಾಗಿ ವಿತರಿಸಲಾಗುತ್ತಿದ್ದು, ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿಟ್ಟುಕೊಳ್ಳಬೇಕು. ಯಾವುದೇ ಗೊಂದಲಕ್ಕೆ ಅವಕಾಶ ನೀಡದೇ ಎಚ್ಚರಿಕೆಯಿಂದ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿ, ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಕ್ರಮ ವಹಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ವಿಜಯಪುರ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಇಂಡಿ ಉಪವಿಭಾಗಾಧಿಕಾರಿ ರಾಮಚಂದ್ರ ಗಡದೆ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ನಿಂಗಪ್ಪ ಗೋಠೆ,ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬಾವುಸಾಹೇಬ ಸುರಖೋಡ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಆಹಾರ ಇಲಾಖೆ ಉಪ ನಿರ್ದೇಶಕ ಸಿದ್ರಾಮ ಮಾರಿಹಾಳ ಸೇರಿದಂತೆ ಜಿಲ್ಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ತಹಶೀಲ್ದಾರರು, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.