ನಾಳೆ ದಾಸೋಹ ದಿನ

ಕಲಬುರಗಿ, ಜ 20: ತುಮಕೂರಿನ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ 4ನೇ ಪುಣ್ಯಸ್ಮರಣೋತ್ಸವ ಪ್ರಯುಕ್ತ ನಾಳೆ( ಜನವರಿ 21) ಬೆಳಗ್ಗೆ 9ಕ್ಕೆ ನಗರದ ಕೋರಂಟಿ ಹನುಮಾನ್ ದೇವಾಲಯದಲ್ಲಿ ದಾಸೋಹ ದಿನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಶರಣಕುಮಾರ್ ತಿಳಿಸಿದ್ದಾರೆ.
ಮಹಾಸಭಾ ಜಿಲ್ಲಾ ಘಟಕ ಹಾಗೂ ಡಾ.ಶರಣಕುಮಾರ್ ಮೋದಿ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಈ ಸಮಾರಂಭದಲ್ಲಿ ಪಾಲ್ಗೊಳ್ಳಬೇಕೆಂದು ಅವರು ಕೋರಿದ್ದಾರೆ.