ನಾಳೆ ದೇಶಾದ್ಯಂತ ನೀಟ್ ಪರೀಕ್ಷೆಗೆ ಸಿದ್ಧತೆ

ನವದೆಹಲಿ, ಸೆ.೧೨ – ಕೊರೊನೊ ಸೋಂಕಿನ ಆತಂಕ ಮತ್ತು ಭಯದ ನಡುವೆ ಯಶಸ್ವಿಯಾಗಿ ಜೆ ಇ ಇ ಮುಖ್ಯ ಪರೀಕ್ಷೆ ನಡೆಸಿ ಫಲಿತಾಂಶ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ, ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ನಾಳೆ ದೇಶಾದ್ಯಂತ ನೀಟ್ ಪರೀಕ್ಷೆ ನಡೆಯಲಿದ್ದು ಅಂತಿಮ ಸಿದ್ದತೆ ಮಾಡಿಕೊಳ್ಳಲಾಗಿದೆ.
ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳ ಎಂಬಿಬಿಎಸ್, ದಂತ ವೈದ್ಯ ಕೋರ್ಸ್ ಸೇರಿದಂತೆ ವಿವಿಧ ವೈದ್ಯಕೀಯ ಕೋರ್ಸ್ ಗಳಿಗೆ ಪ್ರವೇಶಕ್ಕಾಗಿ ಪರೀಕ್ಷೆ ನಡೆಯುತ್ತಿದ್ದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ
ಸೆಪ್ಟೆಂಬರ್ ೧ ರಿಂದ ೬ರ ತನಕ ದೇಶಾದ್ಯಂತ ಜೆ ಇಇ ಮುಖ್ಯಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು ಇದರ ಬೆನ್ನಲ್ಲೇ ಇದೀಗ ನೀಟ್ ಪರೀಕ್ಷೆ ನಡೆಯುತ್ತಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ನಲವತ್ತು ಕಡೆ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಲಾಗಿದೆ.ನಾಳೆ ಮಧ್ಯಾಹ್ನ ೨ಗಂಟೆಯಿಂದ ೫ ಗಂಟೆಯ ತನಕ ನೀಟ್ ಪರೀಕ್ಷೆ ಸುರಕ್ಷತಾ ಕ್ರಮಗಳಂದಿಗೆ ನಡೆಯಲಿದೆ.
ನೀಟ್ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗಾಗಿ ಅವರ ಇಮೇಲ್ ಮತ್ತು ಮೊಬೈಲ್ ಗೆ ಪರೀಕ್ಷಾ ಕೇಂದ್ರಗಳ ಕುರಿತು ಮಾಹಿತಿಯನ್ನು ರಾಷ್ಟ್ರೀಯ ಪರೀಕ್ಷಾ ಕೇಂದ್ರ ರವಾನಿಸಿದ್ದು ಯಾವುದೇ ಆತಂಕವಿಲ್ಲದೆ ಪರೀಕ್ಷೆ ನಡೆಸಲು ಕ್ರಮ ಕೈಗೊಂಡಿದೆ.
ಎರಡು ಗಂಟೆಗೆ ಪರೀಕ್ಷೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮಧ್ಯಾಹ್ನ ೧೨:೩೦ ಪರೀಕ್ಷಾ ಕೇಂದ್ರದಲ್ಲಿ ಹಾಜರಿರುವುದು ಕಡ್ಡಾಯವಾಗಿದೆ .ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಕೆಲವು ಮಾನದಂಡ ಅನುಸರಿಸಿ ಅದನ್ನು ಕಡ್ಡಾಯವಾಗಿ ಎಲ್ಲರೂ ನಿರ್ದೇಶನ ನೀಡಲಾಗಿದೆ
ಮಹಿಳಾ ಅಭ್ಯರ್ಥಿಗಳು ತೆಳುವಾದ ಕೆಲವೇ ಪೂರ್ಣ ತೋಳಿನ ಬಟ್ಟೆ ಧರಿಸುವಂತಿಲ್ಲ ಹೈಹೀಲ್ಡ್ ಚ ಪ್ಪಲಿಯನ್ನು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರಕ್ಕೆ ಯಾವುದೇ ರೀತಿಯ ಮೊಬೈಲ್ ಸೇರಿದಂತೆ ಇನ್ನಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಮುಕ್ತ ಮತ್ತು ನ್ಯಾಯಸಮ್ಮತ ಪರೀಕ್ಷೆ ನಡೆಸಲು ಬೇಕಾದ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಕೈಗೊಂಡಿದೆ ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಮುಖಕ್ಕೆ ಮಾಸ್ಕ್ ಧರಿಸುವ ಜೊತೆಗೆ ಸ್ಯಾನಿಟೈಸ್ ಮಾಡಿಕೊಳ್ಳುವುದು ಅಗತ್ಯ ವಾಗಿದೆ.
ದೇಶದಲ್ಲಿ ಕೊರೊನಾ ಸೋಂಕು ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ಪರೀಕ್ಷೆ ನಡೆಸದಂತೆ ವಿರೋಧ ಪಕ್ಷಗಳ ನಾಯಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು ಅಲ್ಲಿ ಅವರಿಗೆ ಹಿನ್ನಡೆಯಾಗಿತ್ತು.
ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತಿಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಾಘೆಲ್, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೇನ್ , ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸೇರಿದಂತೆ ಮತ್ತಿತರರು ಸುಪ್ರೀಂ ಕೋರ್ಟಿಗೆ ಮನವಿ ಮಾಡಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂದೂಡುವಂತೆ ಮನವಿ ಮಾಡಿದರು.
ದೇಶದಲ್ಲಿ ಕೊರೊನಾ ಸೋಂಕು ಮತ್ತು ಲಾಕ್ ಡೌನ್ ಇರುವ ಹಿನ್ನೆಲೆಯಲ್ಲಿ ಎರಡು ಮೂರು ಬಾರಿ ಪರೀಕ್ಷೆ ಮುಂದೂಡಿ ಅಂತಿಮವಾಗಿ ಕೇಂದ್ರ ಸರ್ಕಾರ ದಿನಾಂಕ ನಿಗದಿ ಮಾಡಿತ್ತು.