ನಾಳೆ ನಗರಕ್ಕೆ ಈರಣ್ಣ ಕಡಾಡಿ ರೈತ ಮೋರ್ಚಾ ಕಾರ್ಯಕಾರಿಣಿ

ಬಳ್ಳಾರಿ, ಡಿ.31: ಬಿ.ಜೆ.ಪಿ, ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿಯವರು ಮೊದಲ‌ ಬಾರಿಗೆ ನಗರಕ್ಕೆ ರೈತ ಜಾಗೃತಿ ಅಭಿಯಾನ” ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ.
ನಗರದ ಬಿಜೆಪಿ‌ ಕಚೇರಿಯಲ್ಲಿ ಬೆಳಿಗ್ಗೆ ಗೋಪೂಜೆ, ನಂತರ ಮಾಧ್ಯಮ ಗೋಷ್ಠಿ, ಬಳಿಕ ಪ್ರಗತಿ ಪರ ರೈತರೊಂದಿಗೆ ಹಮ್ಮಿಕೊಂಡಿರುವ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಆ ಬಳಿಕ‌ ಬಳ್ಳಾರಿ ಜಿಲ್ಲಾ ರೈತ ಮೋರ್ಚಾಕಾರ್ಯಕಾರಿಣಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಚಿವ ಶ್ರೀರಾಮುಲು, ಶಾಸಕ ಜಿ.ಸೋಮಶೇಖರ್‌ರೆಡ್ಡಿ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಲೋಕೇಶ್‌ಗೌಡ, ಪ್ರಧಾನ ಕಾರ್ಯದರ್ಶಿ ಎಸ್. ಶಿವರುದ್ರಪ್ಪ ಮತ್ತು ಶ್ರೀ ಗುರುಲಿಂಗನಗೌಡ, ಕಾರ್ಯದರ್ಶಿ ಚಂದ್ರಶೇಖರ್ ಮಾಗನೂರು, ಬಳ್ಳಾರಿ ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ಚೆನ್ನಬಸವನಗೌಡ, ಪಕ್ಷದ ಎಲ್ಲಾ ನಾಯಕರು, ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆಂದು ರೈತ ಮೋರ್ಚಾ ಜಿಲ್ಲಾಧ್ಯಕ್ಷ ಗಣಪಾಲ್ ಐನಾಥರೆಡ್ಡಿಯವರು ತಿಳಿಸಿದ್ದಾರೆ.